ಜೆಡಿಎಸ್ ಬಲವರ್ಧನೆಗೆ ಕಲ್ಯಾಣ ಕರ್ನಾಟಕದಲ್ಲಿ ಸಭೆ

JDS PRESS MEET (1)
Published on

ರಾಯಚೂರು: ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಯಲ್ಲಿ ಕಲಬುರಗಿ ವಿಭಾಗ ಮಟ್ಟದ ಸಭೆ ಆಯೋಜಿಸಲಾಗುವುದು ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ಹನುಮಂತಪ್ಪ ಆಲ್ಕೋಡ ತಿಳಿಸಿದರು.
ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಸಭೆಯಲ್ಲಿ ಕಲಬುರಗಿ ವಿಭಾಗದ ಎಲ್ಲ ಜಿಲ್ಲಾಧ್ಯಕ್ಷರು, ಮುಂಚೂಣಿ ಘಟಕದ ಅಧ್ಯಕ್ಷರು ಪಾಲ್ಗೊಳ್ಳಲಿದ್ದು, ಸೆ.21ರಂದು ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಸಭೆಯ ದಿನಾಂಕ ನಿರ್ಧಾರ ಮಾಡಲಾಗುವುದು ಎಂದರು.
ಚುನಾವಣೆಯಲ್ಲಿ ಸೋಲು ಗೆಲವು ಸಹಜ. ಸೋತ ಮಾತ್ರಕ್ಕೆ ಮುಂದೆ ಪ್ರಯತ್ನ ಬಿಡುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸ್ವತಂತ್ರವಾಗಿ ಸ್ಪರ‌್ಸಲಿದೆ. ರಾಜ್ಯದ ಎಲ್ಲ ಭಾಗದಲ್ಲಿ ಪಕ್ಷದ ಸಂಘಟನಾ ಸಭೆಗಳನ್ನು ನಡೆಸಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು.
ರಾಜ್ಯದಲ್ಲಿ ಜನರ ಬಹು ನಿರೀಕ್ಷೆಯ ಮೇಲೆ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಜನರ ನಿರೀಕ್ಷೆಯಂತೆ ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿದೆ. ಚುನಾವಣಾ ಸಂದರ್ಭದಲ್ಲಿ ಜನತೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗದೇ ಸೋತಿದೆ.
ರಾಜ್ಯದಲ್ಲಿ ಮಳೆ ಕೊರತೆಯಿಂದ ಜನರು ಅತಂತ್ರ ಸ್ಥಿತಿಗೆ ಸಿಲುಕಿದ್ದರೂ ಬರ ಘೋಷಣೆ ಮಾಡದೇ ನಿರ್ಲಕ್ಷ್ಯ ವಹಿಸುತ್ತಿದೆ. ಇನ್ನೂ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಯೋಜನೆಗಳಿಗೆ ಅನುದಾನ ಒದಗಿಸದೇ ಅಭಿವೃದ್ಧಿ ನಿಂತು ಹೋಗಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿಯೇ ಜನರನ್ನು ದಾರಿತಪ್ಪಿಸುವ ಕೆಲಸಮಾಡಲಾಗುತ್ತಿದೆ.
ತುಂಗಭದ್ರಾ ನೀರಾವರಿ ಸಲಹಾ ಸಮಿತಿ ನಿರ್ಣಯದಂತೆ ಕೊನೆಭಾಗಕ್ಕೆ ನೀರು ಒದಗಿಸಲು ಸಾಧ್ಯವಾಗಿಲ್ಲ. ಚುನಾವಣಾ ಪೂರ್ವದಲ್ಲಿ ಜನತೆ ನೀಡಿದ ಭರವಸೆಗಳನ್ನು ಸರ್ಕಾರ ಮರತೆ ಬಿಟ್ಟಿದೆ ಎಂದು ಹನುಮಂತಪ್ಪ ಆಲ್ಕೋಡ ಹೇಳಿದರು.
ಮಾಜಿ ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿ, ಸರ್ಕಾರ ಉಚಿತ ಯೋಜನೆಗಳನ್ನು ಘೋಷಿಸಿದೆ. ಆದರೆ ಜಾರಿ ಮಾಡುತ್ತಿಲ್ಲ. ಷರತ್ತುಗಳು ವಿಸಿ ಫಲಾನುವಿಗಳಿಗೆ ವಂಚಿಸಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿ ಈಗ ಷರತ್ತುಗಳನ್ನು ಹಾಕಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯ, ಭ್ರಷ್ಟಚಾರದ ವಿರುದ್ಧ ಜೆಡಿಎಸ್ ಬೀದಿಗಳಿದು ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಪಕ್ಷದ ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ, ಪದಾಕಾರಿಗಳಾದ ಮಹಾಂತೇಶ ಪಾಟೀಲ್ ಅತ್ತನೂರು, ಎನ್.ಶಿವಶಂಕರ, ಯುಸ್ೂ ಖಾನ್, ಅನಿಲಕುಮಾರ, ನರಸಪ್ಪ ಆಶಾಪುರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net