ಜೆಡಿಎಸ್-ಬಿಜೆಪಿ ಮೈತ್ರಿಗೆ ಒಲಿದ ಪಟ್ಟ

07M.D.R.2
Published on

ಮದ್ದೂರು: ತಾಲೂಕಿನ ಗೊರವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್-ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೌರಮ್ಮ ಪಾಪಚಾರಿ ಹಾಗೂ ಉಪಾಧ್ಯಕ್ಷರಾಗಿ ಜಿ.ಬಿ.ಉಮೇಶ್ ಅವಿರೋಧವಾಗಿ ಆಯ್ಕೆಯಾದರು.


ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಗೌರಮ್ಮ ಪಾಪಚಾರಿ ಹಾಗೂ ಜಿ.ಬಿ.ಉಮೇಶ್ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಎಇಇ ಬಸವರಾಜ್ ಅವಿರೋಧ ಆಯ್ಕೆಯನ್ನು ಘೋಷಿಸಿದರು.


ಟಿಎಪಿಸಿಎಂಎಸ್ ಉಪಾಧ್ಯಕ್ಷ ರಾಘವ, ಮಾಜಿ ಅಧ್ಯಕ್ಷರಾದ ಶಂಕರೇಗೌಡ, ರಾಮಲಿಂಗಯ್ಯ, ಮುಖಂಡರಾದ ಸಿದ್ದರಾಜು, ಅರುಣ್, ಶ್ರೀಧರ್, ಸಿದ್ದರಾಜು, ಮಹೇಶ್, ಬೋರೇಗೌಡ, ಕುಳ್ಳಪ್ಪ, ಗ್ರಾ.ಪಂ.ಸದಸ್ಯರು ಹಾಗೂ ಪಿಡಿಒ ಮಧುಸೂದನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net