

ಮದ್ದೂರು: ಯುವಕರು ಜೆಡಿಎಸ್ ಪಕ್ಷದ ಬೆಳವಣಿಗೆಗೆ ಒಗ್ಗಟ್ಟಾಗಿ ದುಡಿಯುವುದರ ಮೂಲಕ ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕೆಂದು ಶಾಸಕ ಡಿ.ಸಿ.ತಮ್ಮಣ್ಣ ಮನವಿ ಮಾಡಿದರು.
ತಾಲೂಕಿನ ನಗರಕೆರೆ ಗ್ರಾಮದಲ್ಲಿ ಭಾನುವಾರ ಗ್ರಾಪಂ ಮಾಜಿ ಅಧ್ಯಕ್ಷ ಸಂದೀಪ್ ಸೇರಿದಂತೆ ಗ್ರಾಮದ ಹಲವು ಯುವಕರನ್ನು ಪಕ್ಷಕ್ಕೆ ಮರು ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯದ ಎಲ್ಲ ವರ್ಗದವರ ಪರವಾಗಿ ಚಿಂತಿಸುವ ನಾಯಕರು ಎಂದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ. ಇವರ ಅಧಿಕಾರಾವಧಿಯಲ್ಲಿ ಸರ್ವರಿಗೂ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.
ಗ್ರಾಮದ ಕೆರೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಇದೇ ವೇಳೆ ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು. ಶೀಘ್ರ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದರು.
ಗ್ರಾಪಂ ಮಾಜಿ ಅಧ್ಯಕ್ಷ ನಗರಕೆರೆ ಸಂದೀಪ್, ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಚಿಕ್ಕತಮ್ಮೇಗೌಡ, ಕಾರ್ಯದರ್ಶಿ ದೇವರಹಳ್ಳಿ ವೆಂಕಟೇಶ್, ಮುಖಂಡರಾದ ಮಾದನಾಯಕನಹಳ್ಳಿ ರಾಜಣ್ಣ, ಬಿಳಿಯಪ್ಪ, ರವಿಗೌಡ, ರಾಮಕೃಷ್ಣ, ಮಹೇಂದ್ರ, ಶಕರಣ್ಣಾ, ಕೆಂಪಚಾರಿ, ಪ್ರಮೋದ್, ಕಾರ್ತಿಕ್‌ಕುಮಾರ್ ಇದ್ದರು.