ಜೆಡಿಎಸ್ ಮನೆ ಮನೆ ಪ್ರಚಾರ

30Kush02
Published on

ಕುಶಾಲನಗರ: ಮಡಿಕೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಪರವಾಗಿ ಭಾನುವಾರ ಕುಶಾಲನಗರ ಪುರಸಭೆ ಉಪಾಧ್ಯಕ್ಷೆ ಸೂರಾಯಬಾನು ನೇತೃತ್ವದಲ್ಲಿ ಕುಶಾಲನಗರದ ವಿವಿಧ ಬಡಾವಣೆಗಳಲ್ಲಿ ಮನೆ ಮನೆ ಪ್ರಚಾರ ಮಾಡಲಾಯಿತು.


ಮಡಿಕೇರಿ ಕ್ಷೇತ್ರದಲ್ಲಿ ಈ ಬಾರಿ ಜೆಡಿಎಸ್ ಪರವಾಗಿ ಉತ್ತಮ ವಾತಾವರಣ ನಿರ್ಮಾಣವಾಗಿದೆ. ಈ ಕ್ಷೇತ್ರದಲ್ಲಿ ನಾಪಂಡ ಮುತ್ತಪ್ಪ ಅವರ ಗೆಲುವು ನಿಶ್ಚಿತ ಎನ್ನುವ ವಿಶ್ವಾಸವನ್ನು ಪುರಸಭೆ ಉಪಾಧ್ಯಕ್ಷೆ ಸೂರಾಯಬಾನು ವ್ಯಕ್ತಪಡಿಸಿದರು.

ನಾಪಂಡ ಮುತ್ತಪ್ಪ ಅವರ ನಾಯಕತ್ವ ಒಪ್ಪಿಕೊಂಡು ಎಲ್ಲ ಪಕ್ಷಗಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ. ಬದಲಾವಣೆ ಗಾಳಿ ದಿನೇ ದಿನೆ ಹೆಚ್ಚಾಗುತ್ತಿದ್ದು ಅದರ ಲಾಭ ಜೆಡಿಎಸ್‌ಗೆ ಆಗಲಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net