

ಕೆ.ಆರ್.ಪೇಟೆ: ಕೋಲಾರದ ಮುಳಬಾಗಿಲಿನಲ್ಲಿ ಜೆಡಿಎಸ್ ಪಂಚರತ್ನ ಕಾರ್ಯಕ್ರಮದ ಚಾಲನೆ ಸಮಾವೇಶಕ್ಕೆ ಮನ್ಮುಲ್ ನಿರ್ದೇಶಕ ಎಚ್.ಟಿ.ಮಂಜು ನೇತೃತ್ವದಲ್ಲಿ ತಾಲೂಕಿನಿಂದ ಸಾವಿರಾರು ಕಾರ್ಯಕರ್ತರು ಬಸ್‌ಗಳಲ್ಲಿ ತೆರಳಿದರು.
ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಿಗೂ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿತ್ತು. ಜೆಡಿಎಸ್ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ.
ತಾಲೂಕು ಜೆಡಿಎಸ್ ಅಧ್ಯಕ್ಷ ಎ.ಎನ್.ಜಾನಕೀರಾಮು, ತಾಪಂ ಮಾಜಿ ಸದಸ್ಯ ಮೋಹನ್, ಮುಖಂಡರಾದ ಐಕನಹಳ್ಳಿ ಕೃಷ್ಣೇಗೌಡ, ಅಗ್ರಹಾರಬಾಚಹಳ್ಳಿ ನಾಗೇಶ್, ಐಕನಹಳ್ಳಿ ಗ್ರಾಪಂ ಉಪಾದ್ಯಕ್ಷ ರಮೇಶ್, ಕಿಕ್ಕೇರಿ ವಿಎಸ್‌ಎಸ್‌ಎನ್ ಅಧ್ಯಕ್ಷ ಶೇಖರ್ ಸೇರಿ ಹಲವರಿದ್ದರು.