ಜೆಡಿಎಸ್ ಸೇರಿದ ಕಾಂಗ್ರೆಸ್ ಮುಖಂಡರು

Published on

ಹನೂರು: ಕ್ಷೇತ್ರ ವ್ಯಾಪ್ತಿಯ ಹೊಸದೊಡ್ಡಿಯ ನಿಂಗಶೆಟ್ಟಿ ಹಾಗೂ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ನಟರಾಜು ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಸೋಮವಾರ ಶಾಸಕ ಎಂ.ಆರ್. ಮಂಜುನಾಥ್ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾದರು.

ಈ ವೇಳೆ ನಿಂಗಶೆಟ್ಟಿ ಮಾತನಾಡಿ, ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದೆ. ಆದರೆ ಕೆಲವು ಕಾರಣಾಂತರದಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದೆ. ಶಾಸಕ ಎಂ.ಆರ್ ಮಂಜುನಾಥ್ ಅವರು ಕ್ಷೇತ್ರದ ಬಗ್ಗೆ ಹೆಚ್ಚಿನ ಒಲವನ್ನು ಹೊಂದಿದ್ದು, ಹಲವು ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತಿದ್ದಾರೆ. ಹಾಗಾಗಿ ಇವರ ಕಾರ್ಯವನ್ನು ಮೆಚ್ಚಿ ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣ ಸಹಕಾರ ನೀಡುವುದರ ಮೂಲಕ ಅವರ ಕೈ ಬಲಪಡಿಸಲಾಗುವುದು ಎಂದು ತಿಳಿಸಿದರು.

ಶಾಸಕ ಎಂ.ಆರ್ ಮಂಜುನಾಥ್ ಮಾತನಾಡಿ, ಕ್ಷೇತ್ರದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯಲಿ ಎಂದು ಅಪೇಕ್ಷಿಸಿ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ಇಬ್ಬರು ಕಾಂಗ್ರೆಸ್ ಮುಖಂಡರು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ ಎಂದರು. ಪಪಂ ಅಧ್ಯಕ್ಷೆ ಮುಮ್ತಾಜ್‌ಬಾನು, ಮುಖಂಡರಾದ ಚಿನ್ನವೆಂಕಟ, ರಾಜುಗೌಡ, ವಿಜಯಕುಮಾರ್, ಅಮಿನ್, ಅತಿಕ್, ಮಾದಪ್ಪ, ಮಹದೇವ, ರವಿ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net