ಜೆಡಿಎಸ್ ಸೇರ್ಪಡೆಯಾದ ಕಾಂಗ್ರೆಸ್ ಕಾರ್ಯಕರ್ತರು

30blrp4
ಬೇಲೂರು ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಕೆ.ಎಸ್.ಲಿಂಗೇಶ್ ಸಮ್ಮುಖದಲ್ಲಿ ಅವರ ನಿವಾಸದಲ್ಲಿ ಸೇರ್ಪಡೆಯಾಗಿರುವುದು
Published on

ಬೇಲೂರು: ಬೇಲೂರು ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡ್‌ಗಳ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಕೆ.ಎಸ್.ಲಿಂಗೇಶ್ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.

ಶಾಸಕರ ನಿವಾಸದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಪಕ್ಷ ಭೇದ ಮರೆತು ಕೆಲಸ ಮಾಡುತ್ತಿದ್ದೇನೆ. ಪುರಸಭೆಯಲ್ಲಿ ಜೆಡಿಎಸ್ ಸಾಧಾರಣ ಪ್ರದರ್ಶನ ನೀಡಿದ್ದರೂ ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬೇಲೂರು ಪಟ್ಟಣದ 8, 22 ಮತ್ತು 23ನೇ ವಾರ್ಡಿನ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರಿದ್ದಾರೆ.

ನನ್ನ ಕ್ಷೇತ್ರದ ಜನತೆ ನೆಮ್ಮದಿಯಿಂದ ಬದುಕಬೇಕೆಂಬುದೇ ನನ್ನ ಆಸೆ. ಜಾತ್ಯತೀತ ತತ್ವದ ಮೇಲೆ ನಮ್ಮ ಪಕ್ಷ ಆಡಳಿತ ಮಾಡಲಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಲು ನನಗೆ ನಿಮ್ಮ ಬೆಂಬಲ ಮುಖ್ಯ ಎಂದರು.

ಪುರಸಭೆ ಮಾಜಿ ಅಧ್ಯಕ್ಷ ತಜ್‌ಮುಲ್ ಪಾಷ, ತಾಲೂಕು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಉಮೇಶ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net