ಜೆಡಿಎಸ್‌ಅಧಿಕಾರಕ್ಕೆ ಬರುವುದು ಖಚಿತ

nov27sunti01
Published on

ಸುಂಟಿಕೊಪ್ಪ: ಜನಪರ ಕಾಳಜಿ ಇಲ್ಲದ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಜನರ ಹಿತ ಕಾಪಾಡಲು ಸಾಧ್ಯವಾಗು ವುದಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದರು.


ಮಾದಾಪುರದ ಆಶ್ರಯ ಕಾಲನಿಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 3 ಲಕ್ಷ ಕೋಟಿಗೂ ಅಧಿಕ ಜಿಎಸ್‌ಟಿ ಪಾವತಿಸು ತ್ತಿದ್ದರೂ ರಾಜ್ಯಕ್ಕೆ ಶೇ.49 ಮಾತ್ರ ಕೊಡುಗೆ ನೀಡುತ್ತಿದೆ. ಶಾಸಕರ ಇಚ್ಛಾಶಕ್ತಿ ಕೊರತೆಯಿಂದ ಅಭಿವೃದ್ಧಿ ಕೆಲಸಗಳು ನಿರೀಕ್ಷಿತ ಪ್ರಮಾಣದಲ್ಲಿ ನಡೆದಿಲ್ಲ. ರಸ್ತೆ ಕಾಮಗಾರಿಗಳು ಭೂಮಿಪೂಜೆಗೆ ಮಾತ್ರ ಸೀಮಿತವಾಗುತ್ತಿದೆ ಎಂದು ಆರೋಪಿಸಿದರು.

ಜಿಲ್ಲೆಯ ಜನರಿಗೆ ಉತ್ತಮ ಆಸ್ಪತ್ರೆ ಇಲ್ಲ. ನಿರುದ್ಯೋಗ ಸಮಸ್ಯೆ ಬಿಗಡಾಯಿಸುತ್ತಿದೆ. ವಸತಿ ರಹಿತರಿಗೆ ಬದಲಿ ವ್ಯವಸ್ಥೆ ಕಲ್ಪಿಸುತ್ತಿಲ್ಲ. ಚಿಕ್ಲಿಹೊಳೆ ವಿಭಾಗದ ಕೃಷಿಕರು 2018ರಲ್ಲಿ ಜಮೀನು ಕಳೆದುಕೊಂಡಿದ್ದು ಅವರಿಗೆ ಪರಿಹಾರ ಸಿಗಲಿಲ್ಲ. ಫೆಬ್ರವರಿಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರ ಸ್ವಾಮಿ ಅವರು ಕೊಡಗಿಗೆ ಭೇಟಿ ನೀಡಲಿದ್ದು, ಜಂಬೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಬಡಾವಣೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸಲಿದ್ದಾರೆ ಎಂದು ಹೇಳಿದರು. ಕುಶಾಲನಗರ ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ಡಿ.ರವಿ, ಮುಖಂಡ ನಾಪಂಡ ಮುದ್ದಪ್ಪ ಮಾತನಾಡಿದರು.


ಸೋಮವಾರಪೇಟೆ ತಾಲೂಕು ಜೆಡಿಎಸ್ ಮುಖಂಡ ನಾಗರಾಜು, ಕೂಡಿಗೆ ಜೆಡಿಎಸ್ ಕಾರ್ಯದರ್ಶಿ ನರೇನ್ ಗಣಪತಿ, ಮಾದಾಪುರ ವಿಭಾಗದ ಜೆಡಿಎಸ್ ಅಧ್ಯಕ್ಷ ನಾಪಂಡ ರವಿ ಇದ್ದರು. ಮಾದಾಪುರ ವಿಭಾಗದ 16 ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಗೊಂಡರು. ನಾಪಂಡ ಮುತ್ತಪ್ಪ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net