

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾರ್ಟಳ್ಳಿ ಗ್ರಾಮ ಪಂಚಾಯಿತಿಯ ಟಗರ ಕೋಟಾಯಿ ಗ್ರಾಮದಲ್ಲಿ 30ಕ್ಕೂ ಹೆಚ್ಚು ಮುಖಂಡರು ಬುಧವಾರ ಬಿಜೆಪಿ ತೊರೆದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಉತ್ತಮ ಆಡಳಿತವನ್ನು ನೀಡುವುದರ ಮೂಲಕ ಜನಮನ್ನಣೆ ಗಳಿಸಿದ್ದರು. ಅವರ ಆಡಳಿತವೈಖರಿ ಮೆಚ್ಚಿ ಜನತೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಚ್.ಡಿ ಕುಮಾರಸ್ವಾಮಿ ರಾಜ್ಯದಲ್ಲಿ ಪಂಚರತ್ನ ಯಾತ್ರೆಯನ್ನು ಹಮ್ಮಿಕೊಂಡಿದ್ದು, ಎಲ್ಲ ವರ್ಗದ ಜನರಿಗೆ ಅನುಕೂಲವಾಗಲಿದೆ ಎಂದರು.
ನನಗೊಂದು ಅವಕಾಶ ಕೊಡಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಎದೆಗುಂದದೆ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಿದ್ದೇನೆ. ಬಡವರಿಗೆ, ನಿರ್ಗತಿಕರಿಗೆ ನನ್ನ ಕೈಲಾದ ಸಹಾಯ ಮಾಡುತ್ತಿದ್ದೇನೆ. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.
ಗ್ರಾಮದ ಮಹದೇವಸ್ವಾಮಿ, ಭಾಗ್ಯರಾಜ್, ಪುಟ್ಟತಮ್ಮಡಿ, ಮಾದಯ್ಯ ತಮ್ಮಡಿ, ಬಸವರಾಜು, ಮಹೇಶ್, ಪ್ರಸಾದ್, ನಾಗರಾಜು, ಈರಣ್ಣ, ಮಾದಯ್ಯ, ಶಿವಕುಮಾರ್, ರಾಮಪ್ಪ, ಜಯಮ್ಮ, ರಾಜಮ್ಮ, ಚಿನ್ನತಾಯಿ, ಸಗಾಯಿ ಮೇರಿ, ಮಾರಮ್ಮ, ಕೆಂಪಮ್ಮ, ರತ್ನಮ್ಮ, ಪುಟ್ಟಮ್ಮ, ಮಾದೇವಿ, ಚಿಕ್ಕತಾಯಿ, ಚಿಕ್ಕಮ್ಮ, ಮಾದಮ್ಮ ಸೇರಿದಂತೆ ಇನ್ನಿತರರು ಪಕ್ಷಕ್ಕೆ ಸೇರ್ಪಡೆಯಾದರು. ಚಾಮುಲ್ ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ಜಿಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ, ತಾಪಂ ಮಾಜಿ ಸದಸ್ಯ ಮಣಿ, ಗ್ರಾಪಂ ಸದಸ್ಯ ಅರುಲ್‌ಸೆಲ್ವಂ ಇನ್ನಿತರರಿದ್ದರು.