

ತುಮಕೂರು: ಸೊರಗಿರುವ ಜೆಡಿಎಸ್ ಸಂಟನೆಗೆ ಬಲ ತುಂಬುವ ನಿಟ್ಟಿನಲ್ಲಿ ತುಮಕೂರಿನ ಹೊರವಲಯದ ರೆಸಾರ್ಟ್ನಲ್ಲಿ ಶನಿವಾರ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳ ಪ್ರಮುಖರ ಸಭೆ ಆಯೋಜಿಸಲಾಗಿತ್ತು.
ಮುಂಬರುವ ಜಿಪಂ, ತಾಪಂ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರಲ್ಲಿ ಹೊಸ ಚೈತನ್ಯ, ಹುರುಪು ತುಂಬುವ ನಿಟ್ಟಿನಲ್ಲಿ ರಾಜ್ಯ ಜೆಡಿಎಸ್ ಯುವ ಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ "ಬೂಸ್ಟರ್ ಡೋಸ್' ನೀಡಿದರು. ಲೋಕ ಸಮರದಲ್ಲಿ ಬಿಜೆಪಿ&ಜೆಡಿಎಸ್ ಮೈತ್ರಿ ಸಮನ್ವಯದಿಂದ ನಿರೀೆಗೂ ಮೀರಿ ಉತ್ತಮ ಲಿತಾಂಶ ಪಡೆದ ಹಿನ್ನೆಲೆಯಲ್ಲಿ ಸ್ಥಳಿಯ ಸಂಸ್ಥೆ ಚುನಾವಣೆಗಳಲ್ಲೂ "ಮೈತ್ರಿಧರ್ಮ' ಕಾಪಿಟ್ಟುಕೊಳ್ಳುವ ಸಲುವಾಗಿ ರಾಜ್ಯ, ಜಿಲ್ಲೆ, ತಾಲೂಕುಮಟ್ಟದಲ್ಲಿ ಸಮನ್ವಯ
ಸಮಿತಿ ರಚಿಸುವ ಸುಳಿವುಕೊಟ್ಟರು.
ಜೆಡಿಎಸ್ ಭದ್ರಕೋಟೆ ತುಮಕೂರು ಜಿಲ್ಲೆಯಲ್ಲಿ ಪಕ್ಷ ಸಂಟನೆಯನ್ನು ಇನ್ನಷ್ಟು ಚುರುಕುಗೊಳಿಸಬೇಕಿದೆ. ಸಾಂಸ್ಥಿಕ ಚುನಾವಣೆ ಬಳಿಕ ಸಂಟನೆಯಲ್ಲೂ ಬದಲಾವಣೆ ಕಾಣಬಹುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಜವಾಬ್ದಾರಿಯನ್ನು ಸ್ಥಳಿಯ ಮುಖಂಡರು ಹಂಚಬೇಕು. ಲೋಕ ಸಮರದಲ್ಲಿ ಅಭೂತಪೂರ್ವ ಯಶಸ್ಸಿನ ಬಳಿಕ ಜಿಪಂ, ತಾಪಂ ಚುನಾವಣೆಯಲ್ಲೂ ಬಿಜೆಪಿ ಜತೆಗಿನ ದೋಸ್ತಿ ಮುಂದುವರಿಸಿಕೊಂಡು ಹೋಗಬೇಕಿದ್ದು, ಉಭಯ ಪಕ್ಷಗಳ ವರಿಷ್ಠರು ಈ ನಿಟ್ಟಿನಲ್ಲಿ ಚರ್ಚೆ ಮಾಡಿ ಸಮನ್ವಯ ಸಮಿತಿ ರಚಿಸಲಿದ್ದಾರೆ. ಮೈತ್ರಿ ಧರ್ಮ ಪಾಲಿಸಿಕೊಂಡು ಪಕ್ಷದ ತಳಪಾಯ ಗಟ್ಟಿಗೊಳಿಸಿಕೊಳ್ಳಬೇಕಿದೆ ಎಂದು ನಿಖಿಲ್ ಹೇಳಿದರು.
ಅಭಿವೃದ್ಧಿ ಕಾಮಗಾರಿ ಕಡೆಗಣಿಸಿ ಭ್ರಷ್ಟಾಚಾರದಲ್ಲಿ ಕೈ ಸರ್ಕಾರ ತೊಡಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸರ್ಕಾರದ ಸೇವೆಗಳ ಬೆಲೆ, ದಿನಬಳಕೆ ಪದಾರ್ಥಗಳ ಬೆಲೆ ದುಬಾರಿಯಾಗಿ ಜನಸಾಮಾನ್ಯರು ಜೀವನ ನಡೆಸಲು ಸಂಕಟಪಡುತ್ತಿದ್ದಾರೆ. ಸರ್ಕಾರಕ್ಕೆ ಜನರ ಹಿತಬೇಕಾಗಿಲ್ಲ ಎಂದು ಕುಟುಕಿದರು.
ಭಗವಂತನೇ ಭೂಮಿಗೆ ಇಳಿದು ಬಂದರೂ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲವೆಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಎಂದವರು ಬೆಂಗಳೂರಿನ ಅಭಿವೃದ್ಧಿ ರ್ನಿಲಕ್ಷಿಸಿದ್ದಾರೆ. ಸರ್ಕಾರ ಕೆಲಸ ಮಾಡಿ ಮುಗಿಸಿದ ಗುತ್ತಿಗೆದಾರರಿಗೆ ಬಿಲ್ ಹಣ ಪಾವತಿ ಮಾಡಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಲು ಹೆಣಗಾಡುತ್ತಿರುವ ಸರ್ಕಾರವು ಗುತ್ತಿಗೆದಾರರನ್ನು ಬೀದಿಗೆ ತರುವಂತಹ ಕೆಲಸ ಮಾಡಿದೆ ಎಂದರು.
ರಾಜ್ಯ ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ಧೋರಣೆ ವಿರುದ್ಧ ಜೆಡಿಎಸ್ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ. ರಾಜ್ಯದ ಜನರೂ ಸರ್ಕಾರದ ಆಡಳಿತದ ವಿರುದ್ಧ ಬೇಸತ್ತಿದ್ದಾರೆ. ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲು ಜನ ಸಜ್ಜಾಗಿದ್ದಾರೆ. ಈ ಚುನಾವಣೆಗಳಲ್ಲಿ ಕಾಂಗ್ರೆಸ್ ವಿರುದ್ಧ ಗೆಲುವು ಸಾಧಿಸಲು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಸಿದ್ಧರಾಗಬೇಕು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರ ಪರಿಣಾಮ 19 ಸ್ಥಾನ ಗೆಲ್ಲಲು ಸಾಧ್ಯವಾಗಿದ್ದು, ಮೈತ್ರಿ ಮುಂದುವರಿಸುವ ನಿರ್ಧಾರವನ್ನು ಉಭಯ ಪಕ್ಷಗಳ ವರಿಷ್ಠರು
ತೆಗೆದುಕೊಳ್ಳುತ್ತಾರೆ ಎಂದು ನಿಖಿಲ್ ತಿಳಿಸಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ಬಾಬು, ಶಾಸಕ ಎಂ.ಟಿ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಮಾಜಿ ಶಾಸಕರಾದ ಡಿ.ನಾಗರಾಜಯ್ಯ, ಎಂ.ವಿ.ವೀರಭಧ್ರಯ್ಯ, ಕೆ.ಎಂ.ತಿಮ್ಮರಾಯಪ್ಪ, ಪಿ.ಆರ್.ಸುಧಾಕರಲಾಲ್, ಎಚ್.ಎಸ್.ಶಿವಶಂಕರ್, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ, ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಮುಖಂಡರಾದ ಕೆ.ಟಿ.ಶಾಂತಕುಮಾರ್, ಗುಬ್ಬಿ ನಾಗರಾಜು, ಡಾ.ರವಿ ನಾಗರಾಜಯ್ಯ, ಕೊಂಡವಾಡಿ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯಾಧ್ಯಕ್ಷರಾಗಿ ಎಚ್ಡಿಕೆ: ಕೇಂದ್ರದಲ್ಲಿ ಮಂತ್ರಿಯಾದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪಕ್ಷ ಸಂಟನೆಯಲ್ಲಿ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ ಎಂಬ ಚರ್ಚೆ ನಡೆಯುತ್ತಿದೆ. ಅವರು ವಯಸ್ಸಿಗೆ ಮೀರಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವೇ ಅಪ್ರಸ್ತುತ. ಕುಮಾರಸ್ವಾಮಿ ಸದ್ಯ ಮುಂದುವರಿಯಲಿದ್ದಾರೆ ಎಂದು ನಿಖಿಲ್ ಸ್ಪಷ್ಟಪಡಿಸಿದರು.
ಅಭಿವೃದ್ಧಿ ಶೂನ್ಯ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಶಾಸಕರಿಗೆ ಪ್ರದೇಶಾಭಿವೃದ್ಧಿ ಅನುದಾನ ನೀಡಿಲ್ಲ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಆಡಳಿತ ಹಿಡಿದ ಕಾಂಗ್ರೆಸ್ ನುಡಿದಂತೆ ನಡೆಯುತ್ತಿಲ್ಲ ಎಂದು ನಿಖಿಲ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.ಪ್ರತಿ ತಿಂಗಳು ಗೃಹಲಕ್ಷಿ$್ಮ ಯೋಜನೆ 2 ಸಾವಿರ ರೂಪಾಯಿಗಳನ್ನು 3&-4 ತಿಂಗಳಿನಿಂದ ಕೊಟ್ಟಿಲ್ಲವೆಂದು ತಾಯಂದಿರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಇಲ್ಲದೆ ರೈತರು ಬೆಳೆಗೆ ನೀರು ಹಾಯಿಸಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಸರ್ಕಾರಕ್ಕೆ ರೈತರ ಕಷ್ಟ ಕೇಳುತ್ತಿಲ್ಲ ಎಂದರು.
ಕಾಂಗ್ರೆಸ್ನಲ್ಲಿ ಒಳಜಗಳ ಇದೆ. ಸಿಎಂ, ಡಿಸಿಎಂ ನಡುವೆ ಸಮನ್ವಯತೆ ಇಲ್ಲ. ಒಳಜಗಳ ಕಾರಣದಿಂದ ಸ್ಥಳಿಯ ಸಂಸ್ಥೆ ಚುನಾವಣೆ ಮುಂದೂಡುತ್ತಿರಬಹುದು. ದೇಶದ ಒಳಿತಿಗಾಗಿ ಕಾಂಗ್ರೆಸ್ ವಿರುದ್ಧ ಹೋರಾಡಲು ಬಿಜೆಪಿ ಜತೆ ಕೈಜೋಡಿಸಿದ್ದು, ಜಿಪಂ, ತಾಪಂ ಚುನಾವಣೆಯಲ್ಲೂ ಮೈತ್ರಿ ಅನಿವಾರ್ಯ. ಅದನ್ನು ಉಭಯ ಪಕ್ಷಗಳ ವರಿಷ್ಠರು ನಿರ್ಧಾರ ಮಾಡುತ್ತಾರೆ.| ನಿಖಿಲ್ ಕುಮಾರಸ್ವಾಮಿ
ಅಧ್ಯಕ್ಷ, ರಾಜ್ಯ ಜೆಡಿಎಸ್ ಯುವ ಟಕ