

ಹನೂರು: ವಿಧಾನಸಭಾ ಕ್ಷೇತ್ರದ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ 20ಕ್ಕೂ ಹೆಚ್ಚು ಮುಖಂಡರು ಸೋಮವಾರ ಸಂಜೆ ಬಿಜೆಪಿ ಮತ್ತು ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾದರು.
ಈ ಸಂದರ್ಭ ಜೆಡಿಎಸ್ ಉಪಾಧ್ಯಕ್ಷ ಎಂ.ಆರ್.ಮಂಜುನಾಥ್ ಮಾತನಾಡಿ, ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷ ನಡೆಸಿರುವ ಹಲವು ಸಮಾಜಮುಖಿ ಕಾರ್ಯಗಳನ್ನು ಮೆಚ್ಚಿ ಮುಖಂಡರು ಪಕ್ಷಾಂತರ ಮಾಡಿರುವುದು ಶ್ಲಾಘನೀಯ. ಕ್ಷೇತ್ರದ ಜನತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನನಗೆ 44 ಸಾವಿರಕ್ಕೂ ಹೆಚ್ಚಿನ ಮತ ನೀಡಿದರು. ಇದಕ್ಕೆ ನಾನು ಋಣಿಯಾಗಿದ್ದಾನೆ ಎಂದರು.
ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲಿಲ್ಲ. ಜನಪರ ಯೋಜನೆಗಳನ್ನು ಜಾರಿಗೊಳಿಸಲಿಲ್ಲ. ಈ ಬಗ್ಗೆ ಜನರಿಗೆ ಸತ್ಯ ತಿಳಿದಿದೆ. ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ದಿನೇ ದಿನೆ ಏರಿಕೆ ಮಾಡುತ್ತಿದೆ. ಜನ ಸಾಮಾನ್ಯರನ್ನು ಕಷ್ಟಕ್ಕೆ ನೂಕಿದೆ. ಇದರಿಂದ ಜನತೆ ಬೇಸತ್ತಿದ್ದಾರೆ ಎಂದರು.
ಪಕ್ಷದ ಸಿದ್ಧಾಂತವನ್ನು ಮೆಚ್ಚಿ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಪಕ್ಷದತ್ತ ಒಲವು ತೋರುತ್ತಿದ್ದಾರೆ. ಮುಂಬರುವ ಚುನಾವಣೆಗಳಿಗೆ ಇದು ಗೆಲುವಿನ ದಿಕ್ಸೂಚಿಯಾಗಿದೆ ಎಂದರು.