ಜೆಡಿಎಸ್‌ನಲ್ಲಿ ಪಕ್ಷ ನಿಷ್ಠೆಗೆ ಮನ್ನಣೆ

SRP_10-01jpg
ಶ್ರೀರಂಗಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ಮೂಲ ಕಾರ್ಯಕರ್ತರು ಹಾಗೂ ಹಿರಿಯ ಮುಖಂಡರ ಸಮ್ಮುಖದಲ್ಲಿ ಆಯೋಜಿಸಿದ್ದ ಅತೃಪ್ತರ ಸಭೆಯಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಸಂತೋಷ್ ಮಾತನಾಡಿದರು.
Published on

ಶ್ರೀರಂಗಪಟ್ಟಣ: ಜೆಡಿಎಸ್‌ನಲ್ಲಿ ಪಕ್ಷ ನಿಷ್ಠೆಗೆ ಮನ್ನಣೆಯೇ ಹೊರತು ವ್ಯಕ್ತಿ ನಿಷ್ಠೆಗೆ ಬೆಲೆ ನೀಡುವುದಿಲ್ಲ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಸಂತೋಷ್ ಸ್ಪಷ್ಟಪಡಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಪಕ್ಷದ ಮೂಲ ಕಾರ್ಯಕರ್ತರು ಹಾಗೂ ಹಿರಿಯ ಮುಖಂಡರ ಸಮ್ಮುಖದಲ್ಲಿ ಆಯೋಜಿಸಿದ್ದ ಅತೃಪ್ತರ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ನೇತೃತ್ವದಲ್ಲಿ ಇಂದಿನ ಸಭೆ ಆಯೋಜಿಸಲಾಗಿತ್ತು. ಆದರೆ ಅವರು ಉದ್ದೇಶಪೂರ್ವಕವಾಗಿ ಸಭೆಗೆ ಗೈರಾಗಿರುವಂತಿದೆ. ಸಮಸ್ಯೆಗಳನ್ನು ಬದಿಗಿಟ್ಟು, ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಿನಿಂದ ದುಡಿಯೋಣ. ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸೋಣ ಎಂದರು.

ಇದೇ ವೇಳೆ ಪಕ್ಷದ ತಾಲೂಕು ಅಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಪಕ್ಷದ ಇತರ ಪದಾಧಿಕಾರಿಗಳನ್ನು ಕ್ಷೇತ್ರದ ಶಾಸಕರು ಕಡೆಗಣಿಸಿದ್ದಾರೆ ಎಂದು ಸಭೆಯಲ್ಲಿ ವಿರೋಧ ವ್ಯಕ್ತವಾಯಿತು.

ತಾಲೂಕು ಅಧ್ಯಕ್ಷ ಪೈ.ಮುಕುಂದ, ಪ್ರಧಾನ ಕಾರ್ಯದರ್ಶಿ ಚಿಂದಗಿರಿಕೊಪ್ಪಲು ಸ್ವಾಮಿಗೌಡ, ಕಾರ್ಯಾಧ್ಯಕ್ಷ ಶಿವಸ್ವಾಮಿ, ರೈತ ದಳದ ಮುಖಂಡ ಡಿ.ಎಂ.ರವಿ, ಪಿಕಾರ್ಡ್ ಬ್ಯಾಂಕ್ ಮಾಜಿ ನಿರ್ದೇಶಕ ಬಲ್ಲೇನಹಳ್ಳಿ ಪದ್ಮನಾಭ್, ನಗರ ಘಟಕದ ಅಧ್ಯಕ್ಷ ಸುರೇಶ್, ಮುಖಂಡರಾದ ಕಿರಂಗೂರು ಕುಮಾರಸ್ವಾಮಿ, ಪುರಸಭಾ ಮಾಜಿ ಅಧ್ಯಕ್ಷ ಆರ್.ಕೃಷ್ಣ, ನಗುವನಹಳ್ಳಿ ವಾಸು, ನೆಲಮನೆ ಜಗದೀಶ್, ವಾಸು, ಮಹದೇವಪುರ ಸುರೇಶ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net