

ಚಿತ್ರದುರ್ಗ:ಮೊಳಕಾಲ್ಮೂರು ತಾಲೂಕು ಜೆಬಿ ಹಳ್ಳಿ ಗ್ರಾಪಂ ಪಿಡಿಒ ಎಚ್.ಸುರೇಶ್‌ರನ್ನು ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಸೇವೆ ಯಿ ಂದ ಅಮಾನತುಗೊಳಿಸಿ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ. ಸುರೇಶ್ ನಿಯುಕ್ತಿಗೊಳಿಸಿದ ಸ್ಥಳಕ್ಕೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೆ,ಸರ್ಕಾರ ಮತ್ತು ಮೇಲಧಿಕಾರಿ ಆದೇಶ ಉಲ್ಲಂಘಿಸಿದ್ದರಿಂದ ಅಮಾನತುಗೊಳಿಸಲಾಗಿದೆ ಎಂದು ಸಿಇಒ ತಮ್ಮ ಆದೇಶ ದಲ್ಲಿ ತಿಳಿಸಿದ್ದಾರೆ.