ಜೆಸಿಬಿ ಪಕ್ಷಗಳನ್ನು ನಂಬಬೇಡಿ

bkt-24-6
ಬಾಗಲಕೋಟೆ ನಗರದಲ್ಲಿ ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ಕೆಆರ್‌ಎಸ್ ಪಕ್ಷದಿಂದ ಹಮ್ಮಿಕೊಂಡಿರುವ ಬೈಕ್ ಜಾಥಾ ವೇದಿಕೆ ಕಾರ್ಯಕ್ರಮದಲ್ಲಿ ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಮಾತನಾಡಿದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ ಸಿ. ಎನ್., ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ, ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಮಠದ ಇದ್ದರು.
Published on

ಬಾಗಲಕೋಟೆ: ಕರ್ನಾಟಕಕ್ಕಾಗಿ ನಾವು ಎನ್ನುವ ಹೆಸರಿನಲ್ಲಿ ಕೆಆರ್‌ಎಸ್ ಪಕ್ಷದಿಂದ ಹಮ್ಮಿಕೊಂಡಿರುವ ಬೈಕ್ ಜಾಥಾ ಶನಿವಾರ ನಗರಕ್ಕೆ ಆಗಮಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿತು.

ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಅಭಿವೃದ್ಧಿ ವಿರೋಧಿಗಳು. ಬಾಗಲಕೋಟೆ ಕ್ಷೇತ್ರದ ಶಾಸಕ ಎಚ್.ವೈ.ಮೇಟಿ, ಮಾಜಿ ಶಾಸಕ ವೀರಣ್ಣ ಚರಂತಿಮಠ ಇದರಿಂದ ಹೊರತಾಗಿಲ್ಲ. ಸರ್ಕಾರಿ ಮೆಡಿಕಲ್ ಕಾಲೇಜಿಗೆ ಅನುದಾನ ತರದೇ ಜನರಿಗೆ ಮೋಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭ್ರಷ್ಟರನ್ನು, ಅಪ್ರಾಮಾಣಿಕರನ್ನು, ಸ್ವಜನಪಕ್ಷಪಾತಿಗಳನ್ನು, ಅನೈತಿಕ ನಡವಳಿಕೆ ಉಳ್ಳವರನ್ನು, ಸುಳ್ಳರನ್ನು, ಸಮಾಜಘಾತುಕ ಶಕ್ತಿಗಳನ್ನು, ಕುಟುಂಬ ರಾಜಕಾರಣದ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಮಣ್ಣುಪಾಲು ಮಾಡುತ್ತಿರುವ ಜೆ.ಸಿ.ಬಿ. ಪಕ್ಷಗಳ ಪರಮಸ್ವಾರ್ಥಿಗಳು. ಜನಪರ ಕಾಳಜಿಯ, ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನಾಡಪ್ರೇಮಿ ಸೈನಿಕರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ ಸಿ. ಎನ್., ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ, ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಮಠದ, ಬಿ. ಜಿ. ಕುಂಬಾರ, ಧರೆಪ್ಪ ದಾನಗೌಡ, ಸಾಗರ ಕುಂಬಾರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net