ಜೆಸಿಬಿಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

sri- collead
ಶೃಂಗೇರಿ ತಾಲೂಕು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಸ.ಪ.ಪೂರ್ವ ಕಾಲೇಜುಗಳ ಕ್ರೀಡಾಕೂದಲ್ಲಿ ಜೆಸಿಬಿಎಂ ಕಾಲೇಜು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಪ್ರಾಚಾರ್ಯ ಡಾ. ಎಂ.ಸ್ವಾಮಿ ಇತರರಿದ್ದರು.
Published on

ಶೃಂಗೇರಿ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕು ಮಟ್ಟದ ಸ.ಪ.ಪೂರ್ವ ಕಾಲೇಜುಗಳ ಕ್ರೀಡಾಕೂದಲ್ಲಿ ಜೆಸಿಬಿಎಂ ಕಾಲೇಜು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಬಾಲಕರ ವಿಭಾಗದ ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್, ಟೇಬಲ್ ಟೆನಿಸ್, ಯೋಗ, ರಿಲೇಗಳಲ್ಲಿ ಪ್ರಥಮ ಸ್ಥಾನ, ಚೆಸ್, ಕೋಕೋ ಮತ್ತು ಟೆನ್ನಿಕ್ವಾಯಿಟ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಬಾಲಕಿಯರ ವಿಭಾಗದ ಟೇಬಲ್ ಟೆನಿಸ್, ಚೆಸ್, ಕಬಡ್ಡಿಯಲ್ಲಿ ಪ್ರಥಮ ಸ್ಥಾನ, ಯೋಗ, ಥ್ರೋಬಾಲ್, ಬಾಲ್ ಬಾಡ್ಮಿಂಟನ್, ಟೆನ್ನಿಕ್ವಾಯಿಟ್, ರಿಲೇಗಳಲ್ಲಿ ದ್ವಿತೀಯ ಸ್ಥಾನ ಪಡೆದು ಸಮಗ್ರ ಪ್ರಶಸ್ತಿಗೆ ಕಾಲೇಜು ಭಾಜನವಾಗಿದೆ. ವಿದ್ಯಾರ್ಥಿ ಅಶ್ವಿನ್ ವೈಯಕ್ತಿಕ ಚಾಂಪಿಯನ್ ಪಟ್ಟ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಎಂ.ಸ್ವಾಮಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net