ಜೆಸ್ಕಾಂ ನಿರ್ದೇಶಕರಾಗಿ ಕಾರಬಾರಿ

Baburao Karbhari
Published on

ಬೀದರ್: ಜಿಪಂ ಮಾಜಿ ಅಧ್ಯಕ್ಷ, ಮರಾಠಾ ಸಮಾಜದ ಹಿರಿಯ ಮುಖಂಡ ಬಾಬುರಾವ ಕಾರಬಾರಿ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ರಾಜ್ಯ ಸರ್ಕಾರ ಇತ್ತೀಚೆಗೆ ಇವರ ನೇಮಕ ಆದೇಶ ಹೊರಡಿಸಿದೆ.

ಜೆಸ್ಕಾಂ ನಿರ್ದೇಶಕರ ಮಂಡಳಿಯ ಅಧಿಕಾರೇತರ ನಿರ್ದೇಶಕರನ್ನಾಗಿ ಕಾರಬಾರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ. ಪಕ್ಷದಲ್ಲಿ ಕಳೆದ ಅವಧಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಕಾರಬಾರಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಇವರ ಪಕ್ಷ ಸೇವೆಗೆ ಪರಿಗಣಿಸಿ ಈ ಅವಕಾಶ ಕಲ್ಪಿಸಲಾಗಿದೆ.

ನೂತನ ನಿರ್ದೇಶಕ ಕಾರಬಾರಿ ಅವರನ್ನು ಶಿವ ಛತ್ರಪತಿ ಸ್ಮಾರಕ ಸಮಿತಿ ಸಂಚಾಲಿತ ಇಲ್ಲಿಯ ಜೀಜಾಮಾತಾ ಕನ್ಯಾ ಪ್ರೌಢಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ನಗರದಲ್ಲಿ ಬುಧವಾರ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕಾರಬಾರಿ, ಸರ್ಕಾರ ನನಗೆ ವಹಿಸಿದ ಜವಾಬ್ದಾರಿ ಪ್ರಾಮಾಣಿಕವಾಗಿ ನಿಭಾಯಿಸುವೆ. ಪಕ್ಷ ಹಾಗೂ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವಂತಹ ಕೆಲಸ ಮಾಡುವೆ ಎಂದು ಹೇಳಿದರು.

ಪ್ರೌಢ ಶಾಲೆ ಮುಖ್ಯ ಶಿಕ್ಷಕ ಪರಮೇಶ್ವರ ಬಿರಾದಾರ, ಸಹ ಶಿಕ್ಷಕರಾದ ರಾಜಕುಮಾರ ಗಾದಗೆ, ಅನಿಲಕುಮಾರ ಟೆಕೋಳೆ, ಸಂಜಯ ಪಾಟೀಲ್, ಆನಂದ ಜಾಧವ್, ಪ್ರಭಣ್ಣ ಕಾಳಗೊಂಡ, ನಾಗರತ್ನ ಜಮಾದಾರ, ಮೋಹನ್ ಜೋಶಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net