ಜೇನುಕುರುಬರಿಗೆ ಮನೆ ನಿರ್ಮಾಣ

Published on

ಮಡಿಕೇರಿ: ಪ್ರಧಾನಮಂತ್ರಿಯವರ ಪಿಎಂ-ಜನ್‌ಮನ್ ಯೋಜನೆಯಡಿ ಜೇನುಕುರುಬ ಸಮುದಾಯದವರಿಗೆ ಘಟಕ ವೆಚ್ಚ 4.50 ಲಕ್ಷ ರೂ.ಗಳಲ್ಲಿ ಮನೆ ಮಂಜೂರು ಮಾಡಲಾಗುತ್ತಿದ್ದು, ವಸತಿ ರಹಿತ ಜೇನುಕುರುಬ ಜನಾಂಗದ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಕೋರಿದ್ದಾರೆ.

ಜೇನುಕುರುಬ ಜನಾಂಗದವರನ್ನು ಹೊರತುಪಡಿಸಿ ಇತರ ಪರಿಶಿಷ್ಟ ಪಂಗಡದ ಜನಾಂಗದವರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿ ಕಚೇರಿಯಲ್ಲಿ ನಿವೇಶನ ರಹಿತ ಮತ್ತು ವಸತಿ ರಹಿತ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net