ಜೇವರ್ಗಿಯಲ್ಲಿ ದಸರಾ ಕ್ರೀಡಾಕೂಟ ಶುಕ್ರವಾರದಿಂದ

dasara sports
Published on

ಜೇವರ್ಗಿ: ಜೇವರ್ಗಿ ಹಾಗೂ ಯಡ್ರಾಮಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಶುಕ್ರವಾರ, ಶನಿವಾರ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಿ.ಗಾಯತ್ರಿ ತಿಳಿಸಿದ್ದಾರೆ.

ಮಹಿಳೆಯರು ಹಾಗೂ ಪುರುಷರಿಗೆ 100 ಮೀ, 200, 400, 800, 1500, 5000, 10,000 ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, 100 ಮೀ ಹರ್ಡಲ್ಸ್, 4100 ಮೀ, 4400ಮೀ ರಿಲೇ ಸೇರಿ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಮಾಹಿತಿಗಾಗಿ ಕಚೇರಿಗೆ ಭೇಟಿ ನೀಡಬಹುದು ಅಥವಾ ತಾಲೂಕು ಕ್ರೀಡಾಂಗಣದ ವ್ಯವಸ್ಥಾಪಕ ಸಂಗಮೇಶ ಕೊಂಬಿನ್ (95356 66606) ಅವರನ್ನು ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net