

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.07ರಂದು ಮಂಡಿಸಲಿರುವ ಬಜೆಟ್‌ನಲ್ಲಿ ನಮ್ಮ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಜೈ ಭೀಮ್ ಬ್ರಿಗೇಡ್ ಸಂಘಟನೆಯ ವತಿಯಿಂದ ಪ್ರಭಾರಿ ಜಿಲ್ಲಾಧಿಕಾರಿ ಪೂರ್ಣಿಮಾ ಅವರಿಗೆ ಮನವಿ ಸಲ್ಲಿಸಲಾಯಿತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ ಸಾವಿರಾರು ಕೋಟಿ ಅನುದಾನವನ್ನ ಇತರೆ ಯೋಜನೆಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ಸಾಕಷ್ಟು ತೊಂದರೆಯಾಗುತ್ತಿದ್ದು, ಮುಖ್ಯಮಂತ್ರಿ ಅವರು ಇದರ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಒತ್ತಾಯಿಸಿದರು.
ಕಳೆದ ಬಿಜೆಪಿ ಸರ್ಕಾರದಲ್ಲಿ ಕೊಳಚೆ ನಿರ್ಮೂಲನ ಮಂಡಳಿಯಿಂದ ಬಡವರಿಗೆ ನಿರ್ಮಿಸಿರುವಂತಹ ವಸತಿ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. .ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷ ಉಚಿತವಾಗಿ ಉನ್ನತ ಮಟ್ಟದ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡಬೇಕು ಎಂದು ಆಗ್ರಹಿಸಿದರು.
ಸುಳ್ಳು ಪ್ರಮಾಣ ಪತ್ರ ನೀಡಿ ಸವಲತ್ತುಗಳನ್ನು ಪಡೆಯುವಂತಹ ಅವರಿಗೆ ಎಸ್ಸಿ ಎಸ್ಟಿ ಕಾಯ್ದೆ ಪ್ರಕಾರ ಸೂಕ್ತ ಕೈಗೊಳ್ಳಬೇಕು ಜತೆಗೆ ಹಾಸನಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸ್ಥಳಕ್ಕೆ ಹಿಂದಿನ ಸರ್ಕಾರ ಅನುದಾನ ನೀಡಿದೆ. ಹೆಚ್ಚುವರಿಯಾಗಿ 10 ಕೋಟಿ ಮತ್ತು 10 ಎಕರೆ ಭೂಮಿಯನ್ನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜೈ ಭೀಮ್ ಬ್ರಿಗೇಡ್ ಸಮಿತಿಯ ಜಿಲ್ಲಾಧ್ಯಕ್ಷ ರಾಜೇಶ್, ಕುಮಾರಸ್ವಾಮಿ, ಪ್ರಸಾದ್ ಇತರರಿದ್ದರು