ಜೈವಿಕ ಇಂಧನ ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಭೇಟಿ

ctd-sjmit...
Published on

ಚಿತ್ರದುರ್ಗ: ನಗರದ ಎಸ್‌ಜೆಎಂಐಟಿ ಕಾಲೇಜಿನ ಜಿಲ್ಲಾ ಜೈವಿಕ ಇಂಧನ ಮಾಹಿತಿ, ಸಂಶೋಧನೆ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಬುಧವಾರ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಕೆಎಲ್‌ಎಸ್ ಶಿವಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಆರ್.ಲೋಹಿತ್ ಭೇಟಿ ನೀಡಿ ಪರಿಶೀಲಿಸಿದರು. ಪ್ರಾಚಾರ‌್ಯ ಡಾ.ಪಿ.ಬಿ.ಭರತ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಎಸ್. ಪಿ.ಶಿವಕುಮಾರ್, ಕೇಂದ್ರದ ಸಂಚಾಲಕ ಡಾ.ಎ.ಎಂ.ರಾಜೇಶ್, ಸಹ ಸಂಚಾಲಕ ಪ್ರೊ.ಜಿ.ಎಸ್.ಪ್ರಭುಸ್ವಾಮಿ, ಸುನಿಲ್‌ಕುಮಾರ್ ಇದ್ದರು. ಸ್ಕಿಲ್ ಕೌನ್ಸಿಲ್ ಫಾರ್ ಗ್ರೀನ್ ಜಾಬ್ ಕೇಂದ್ರಕ್ಕೆ ಭೇಟಿ ನೀಡಿದ ಅಧಿಕಾರಿಗಳು ಕೇಂದ್ರದ ಕೋರ್ಸುಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

-----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net