ಜೋಗ ಜಲಪಾತದ ಬಳಿ ಸಂಚಾರ ಸಿಕ್ಕು

6 kgl jog 1
ಜೋಗ ಜಲಪಾತ ವೀಕ್ಷಿಸಲು ಭಾನುವಾರ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಪ್ರವಾಸಿಗರು.
Published on

ಕಾರ್ಗಲ್: ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಭಾನುವಾರ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು.

ಜೋಗ ಜಲಪಾತದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥಿತವಾದ ಜಾಗದ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿಲ್ಲ. ವೀಕೆಂಡ್ ಕಾರಣದಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿ ವಾಹನಗಳನ್ನು ರಸ್ತೆಯ ಇಕ್ಕೆಲಗಳಲ್ಲಿ ನಿಲ್ಲಿಸಲಾಗಿತ್ತು. ಭಾನುವಾರ ಕಿಲೊ ಮೀಟರ್‌ವರೆಗೆ ಸಾಲು ಸಾಲು ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಶರಾವತಿ ಕಣಿವೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಧಾರಾಕಾರ ಸುರಿಯುತ್ತಿರುವ ಆರಿದ್ರಾ ಮಳೆಯಿಂದ ವಿಶ್ವ ವಿಖ್ಯಾತ ಜೋಗ ಜಲಪಾತ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಸುರಿಯುತ್ತಿರುವ ಮಳೆಯ ನಡುವೆಯೂ ಜಲಪಾತದ ಮುಖ್ಯ ವೀಕ್ಷಣಾ ಸ್ಥಳದಲ್ಲಿ ಪ್ರವಾಸಿಗರು ತುಂಬಿ ಹೋಗಿತ್ತು. ಕವಿದಿದ್ದ ಹೊಗೆ ಸರಿದು ಧುಮ್ಮಿಕ್ಕುವ ಜಲಪಾತದ ಸೌಂದರ್ಯ ವೀಕ್ಷಿಸಲು ಪ್ರವಾಸಿಗರು ಕಾಯುತ್ತಾ ನಿಲ್ಲುವಂತಾಗಿತ್ತು.

ಜೋಗ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿ ಟ್ರಾಫಿಕ್ ನಿಯಂತ್ರಿಸಲು ಹರಸಾಹಸಪಟ್ಟರು. ಜೆಎಂಎ ಖಾಸಗಿ ಭದ್ರತಾ ಸಿಬ್ಬಂದಿ ವಾಹನ ದಟ್ಟಣೆ ಸುಗಮಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net