ಕಲಬುರಗಿ: ನಗರದ ಹೊರವಲಯದ ಹೀರಾಪುರ ಗ್ರಾಮದಲ್ಲಿ ಶ್ರೀ ಜೋಡಬಸವೇಶ್ವರ ಜಾತ್ರೆ ನಿಮಿತ್ತ ಮಂಗಳವಾರ ಸಹಸ್ರಾರು ಭಕ್ತರ ಮಧ್ಯೆ ಅದ್ದೂರಿ ರಥೋತ್ಸವ ಜರುಗಿತು. ಪುರವಂತರ ಸೇವೆ, ವಾದ್ಯ ವೈಭವದೊಂದಿಗೆ ಪಲ್ಲಕ್ಕಿ ಉತ್ಸವ ನೆರವೇರಿತು. ಭಕ್ತರು ರಥಕ್ಕೆ ಉತ್ತತ್ತಿ, ಬಾಳೆ ಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.