ಜೋಡೆತ್ತುಗಳಿಗೆ ಪಾದಪೂಜೆ

IMG_20230423_162131 - Copy
Published on

ನುಗ್ಗೇಹಳ್ಳಿ: ಬಸವ ಜಯಂತಿ ಹಬ್ಬದ ಪ್ರಯುಕ್ತ ಕಲ್ಕೆರೆ ಚೌಡೇನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಬಾಲಕೃಷ್ಣ ಜೋಡೆತ್ತುಗಳ ಪಾದಪೂಜೆ ನೆರವೇರಿಸಿ ಬಸವ ಜಯಂತಿ ಆಚರಿಸಿದರು.


ತಾಲೂಕಿನ ಕಲ್ಯಾಣಕ್ಕಾಗಿ 120 ಕೆರೆಗಳಿಗೆ ಏತ ನೀರಾವರಿ ಯೋಜನೆ ಮೂಲಕ ಹೇಮಾವತಿ ನದಿ ನೀರು ಹರಿಸಲಾಗಿದೆ. ಇದರಿಂದ ಅಂತರ್ಜಲ ವೃದ್ಧಿಯಾಗಿ ರೈತರು ಕೊಳವೆಬಾವಿಗಳ ಮೂಲಕ ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಅನುಕೂಲವಾಗಿದೆ. ರಾಜ್ಯದಲ್ಲಿ ಪಂಚರತ್ನ ಯೋಜನೆ ಮೂಲಕ ನೀರಾವರಿ, ಕೃಷಿ, ಆರೋಗ್ಯ, ಶಿಕ್ಷಣ, ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಮತ್ತೊಮ್ಮೆ ಕುಮಾರಸ್ವಾಮಿ ಮೂರನೇ ಬಾರಿಗೆ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಬಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.


ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿರ್ದೇಶಕ ಸಿ.ಎನ್. ಪುಟ್ಟಸ್ವಾಮಿಗೌಡ, ತಾಲೂಕ ಜೆಡಿಎಸ್ ಅಧ್ಯಕ್ಷ ಪರಮ ದೇವರಾಜೇಗೌಡ, ಲಾಯರ್ ಬಸವರಾಜ್, ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ಮುಖಂಡರಾದ ಧರ್ಮರಾಜ್, ವಾಸು, ಕುಮಾರ್, ಮಧು, ಕಾರ್ಯಕರ್ತರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net