ಜೋಶಿ ಕಚೇರಿ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ

h6-Congress 2
Published on

ಹುಬ್ಬಳ್ಳಿ: ರಾಜ್ಯ ಸರ್ಕಾರದ ಗ್ಯಾರಂಟಿ ಘೊಷಣೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಗುರುವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಇಲ್ಲಿಯ ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಕೇಂದ್ರ ಸಚಿವರ ಕಚೇರಿ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಕಾರ್ಯಕರ್ತರು ಉದ್ದೇಶಿಸಿದ್ದರು. ಆದರೆ, ಅದಕ್ಕೆ ಪೊಲೀಸ್​ರು ಅವಕಾಶ ನೀಡಲಿಲ್ಲ. ಈ ವೇಳೆ ಪ್ರಲ್ಹಾದ ಜೋಶಿ ಕಚೇರಿಯಲ್ಲಿ ಇರಲಿಲ್ಲ.

ಕಚೇರಿ ಹೊರಗೆ ಪ್ರತಿಭಟನೆ ನಡೆಸಿದ ಕಾರ್ಯಕತರ್ತರು, ಬಡವರ ಅನ್ನಕ್ಕೆ ಕನ್ನ ಹಾಕಿದ ಮೋದಿ ಸರ್ಕಾರಕ್ಕೆ...ರಾಜ್ಯದ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಿರುವ ಮೋದಿ ಸರ್ಕಾರಕ್ಕೆ...ರಾಜ್ಯಕ್ಕೆ ಅಕ್ಕಿ ನೀಡದಂತೆ ಎಫ್​ಸಿಐಗೆ ತಾಕೀತು ಮಾಡಿದ ಕೇಂದ್ರ ಸರ್ಕಾರಕ್ಕೆ...ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ...ಎಂದು ಹೇಳಿ ಧಿಕ್ಕಾರದ ಘೊಷಣೆ ಕೂಗಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net