ಜ್ಞಾನದ ಬೆಳಕಿನ ದಿನ

TKE (AJP
ಅಜ್ಜಂಪುರದಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಶಾಸಕ ಜಿ.ಎಚ್.ಶ್ರೀನಿವಾಸ್, ಜಿ.ನಟರಾಜ್, ವಿನಾಯಕ ಸಾಗರ್, ನಟರಾಜ್, ಟಿ.ಜಿ.ರಮೇಶ್ ಇತರರಿದ್ದರು.
Published on

ತರೀಕೆರೆ: ಅಂಬೇಡ್ಕರ್ ಚಿಂತನೆಗಳನ್ನು ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಸಾಕಾರಗೊಳಿಸುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಅಜ್ಜಂಪುರದಲ್ಲಿ ತಾಲೂಕು ಆಡಳಿತ, ತಾಪಂನಿಂದ ಏರ್ಪಡಿಸಿದ್ದ ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಜಯಂತಿಯಲ್ಲಿ ಮಾತನಾಡಿ, ಅಸಮಾನತೆ ವಿರುದ್ಧ ಹೋರಾಡಿ ಶ್ರೇಷ್ಠ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರು ಮಹಿಳೆಯರಿಗೆ ಪುರುಷರಷ್ಟೇ ಸಮಾನ ಹಕ್ಕು ಕೊಟ್ಟಿದ್ದಾರೆ. ಸಮಾಜಕ್ಕೆ ಅವರು ನೀಡಿರುವ ಅಸಾಮಾನ್ಯ ಕೊಡುಗೆ ಪರಿಗಣಿಸಿರುವ ವಿಶ್ವ ಸಂಸ್ಥೆ ಬಾಬಾ ಸಾಹೇಬರ ಜನ್ಮದಿನವನ್ನು ಜ್ಞಾನದ ಬೆಳಕಿನ ದಿನವೆಂದು ಸಾರಿದೆ ಎಂದರು.

ಅಂಬೇಡ್ಕರ್ ಜೀವನ, ಸಾಧನೆ ಕುರಿತು ವಿಶೇಷ ಉಪನ್ಯಾಸ ನೀಡಿದ ಕೆ.ಬಿ.ಕಿರಣ್‌ಬಾಬು, ಭಾರತದಲ್ಲಿ ಹಿಂದು ಧರ್ಮ ಸುಧಾರಣೆಯಾಗದ ಹೊರತು ಪ್ರಜಾಪ್ರಭುತ್ವ ಯಶಸ್ಸು ಕಾಣದು ಎಂದು ಬಾಬಾ ಸಾಹೇಬರು ಪ್ರತಿಪಾದಿಸಿದ್ದರು ಎಂದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ದಲಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಪಟ್ಟಣದ ಪ್ರಮುಖ ರಸ್ತೆಯಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.

ಕೆಪಿಸಿಸಿ ಸದಸ್ಯ ಜಿ.ನಟರಾಜ್, ತಹಸೀಲ್ದಾರ್ ವಿನಾಯಕ ಸಾಗರ್, ಉಪ ತಹಸೀಲ್ದಾರ್ ನೇತ್ರಾವತಿ, ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ನಟರಾಜ್, ಪಪಂ ಮುಖ್ಯಾಧಿಕಾರಿ ಟಿ.ಜಿ.ರಮೇಶ್, ಪ್ರಮುಖರಾದ ಮಹೇಂದ್ರ ಸ್ವಾಮಿ, ತಿಪ್ಪೇಶ್ ಮಡಿವಾಳ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net