ಜ್ಞಾನವಿಕಾಸ ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ

8spt3
Published on

ಸೋಮವಾರಪೇಟೆ: ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಸೋಮವಾರ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವಸಾಕ್ಷರತಾ ದಿನ ಆಚರಿಸಲಾಯಿತು.

ಕಾರ್ಯಕ್ರಮವನ್ನು ಕ್ಲಬ್ ಅಧ್ಯಕ್ಷ ತನ್ಮಯಿ ಪ್ರವೀಣ್ ಉದ್ಘಾಟಿಸಿ ಮಾತನಾಡಿ, ಜನರಿಗೆ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸಲು ವಿಶ್ವ ಸಾಕ್ಷರತಾ ದಿನವನ್ನು ಆಚರಿಸಲಾಗುತ್ತದೆ. ಸಾಕ್ಷರತೆಯ ಶಕ್ತಿಯೂ ಯಾವುದೇ ಮನೆ, ಕುಟುಂಬ ಮತ್ತು ಸಮಾಜದ ಅಭಿವೃದ್ಧಿಯ ಅಡಿಪಾಯವನ್ನು ಬಲಪಡಿಸುತ್ತದೆ ಎಂದು ಹೇಳಿದರು.

ಶಿಕ್ಷಣವನ್ನು ದೇಶದ ಸಂಪತ್ತು ಎಂದೇ ತಿಳಿಯಲಾಗಿದೆ. ವಿದ್ಯಾರ್ಥಿಗಳು ನಿರಂತರ ಕಲಿಕೆಯಿಂದ ಉತ್ತಮ ಜ್ಞಾನವನ್ನು ಸಂಪಾದಿಸಬಹುದು ಎಂದು ಹೇಳಿದರು.

ಮುಖ್ಯ ಶಿಕ್ಷಕಿ ಎಂ.ಜೆ.ಅಣ್ಣಮ್ಮ ಅವರನ್ನು ಸನ್ಮಾನಿಸಲಾಯಿತು. ಬಡವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಯಿತು. ಕ್ಲಬ್ ಕಾರ್ಯದರ್ಶಿ ಸುವಿನಾ ಕೃಪಾಲ್, ಖಜಾಂಚಿ ಆಶಾ ಮೋಹನ್, ಮಾಜಿ ಅಧ್ಯಕ್ಷೆ ಪ್ರೇಮಾ ಹೃಷಿಕೇಶ್, ಸಂಧ್ಯಾರಾಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net