ಜ್ಯೋತಿ ಯಾತ್ರೆಗೆ ಸ್ವಾಗತ

Kitturu Chennamma Jyoti Yatre Welcome photo
Published on

ಬೀದರ್: ನಗರಕ್ಕೆ ಬಂದ ಕಿತ್ತೂರು ಉತ್ಸವ-2022 ರ ಪ್ರಯುಕ್ತ ಕನ್ನಡ ಮತ್ತು ಸಂಸ್ಕøತಿ ಇಲಾಖೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆಗೆ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚುನಾವಣಾ ತಹಶೀಲ್ದಾರ್ ಗೋಪಾಲ್ ಕರ್ಪೂರ ಸ್ವಾಗತಿಸಿದರು.
ಯಾತ್ರೆಯು ನಗರದ ಬಸವೇಶ್ವರ ವೃತ್ತ, ಭಗತ್‍ಸಿಂಗ್ ವೃತ್ತ, ಅಂಬೇಡ್ಕರ್ ವೃತ್ತ, ಜನರಲ್ ಕಾರ್ಯಪ್ಪ ವೃತ್ತ, ರೋಟರಿ ಕನ್ನಡಾಂಬೆ ವೃತ್ತ, ಮಡಿವಾಳ ಮಾಚಿದೇವ ವೃತ್ತ, ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ ಹುಮನಾಬಾದ್‍ಗೆ ತೆರಳಿತು.
ಶಿರಸ್ತೆದಾರ ಕಿರಣಕುಮಾರ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಕನ್ನಡಾಂಬೆ ಗೆಳೆಯರ ಬಳಗದ ಅಧ್ಯಕ್ಷ ವಿರೂಪಾಕ್ಷ ಗಾದಗಿ, ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net