ಜ್ಯೋತಿ ರಥಯಾತ್ರೆ ಜಿಲ್ಲೆ ಪ್ರವೇಶ ಜು. 9ಕ್ಕೆ

Yathre
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.41277778, 0.5521667);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 42;
Published on

ಚಿತ್ರದುರ್ಗ: ಕರ್ನಾಟಕ ಸುವರ್ಣ ಸಂಭ್ರಮ-50ರ ಅಂಗವಾಗಿ ಜ್ಯೋತಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಜು. 9ರಂದು ಜಿಲ್ಲೆ ಪ್ರವೇಶಿಸುತ್ತಿದ್ದು, ಅಂದು ಹೊಳಲ್ಕೆರೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.

ರಥಯಾತ್ರೆ ಗೌರವಯುತವಾಗಿ ಬರಮಾಡಿಕೊಳ್ಳಲು ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದರು.

ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲಕ 9ರಂದು ಹೊಳಲ್ಕೆರೆ ಪ್ರವೇಶಿಸಲಿದೆ. 10ರಂದು ಚಿತ್ರದುರ್ಗ, 11ಕ್ಕೆ ನಾಯಕನಹಟ್ಟಿ, 12ಕ್ಕೆ ಚಳ್ಳಕೆರೆ, 13ರಂದು ಹಿರಿಯೂರು, 14ಕ್ಕೆ ಹೊಸದುರ್ಗದಲ್ಲಿ ಸಂಚರಿಸಲಿದೆ. ನಂತರ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಗೆ ತೆರಳಲಿದೆ ಎಂದು ಮಾಹಿತಿ ನೀಡಿದರು.

9ರಿಂದ 14ರವರೆಗೆ ಜಿಲ್ಲೆಯ ವಿವಿಧೆಡೆ ಸಂಚರಿಸುವ ವೇಳೆ ಸಂಬಂಧಿಸಿದ ಆ ಭಾಗದ ತಹಸೀಲ್ದಾರ್, ಬಿಇಒ, ಕಸಾಪ ಅಧ್ಯಕ್ಷರು ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆೆಯೊಂದಿಗೆ ರಥಯಾತ್ರೆಯನ್ನು ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾತನಾಡಿ, ಯಾತ್ರೆಯೂ ನಗರ ಮತ್ತು ತಾಲೂಕುವಾರು ಯಾವ ಮಾರ್ಗವಾಗಿ ಸಂಚರಿಸಲಿದೆ ಎಂಬ ರೂಟ್ ಮ್ಯಾಪ್ ಸಿದ್ಧಪಡಿಸಿ ಮಾಹಿತಿ ನೀಡಲಾಗುವುದು. ಇದೇ ವೇಳೆ ಸಾಂಸ್ಕೃತಿಕ ಕಲಾತಂಡಗಳನ್ನು ಕೂಡ ಬಳಸಿಕೊಳ್ಳಲಾಗುವುದು. ಅಲ್ಲದೆ, ಕನ್ನಡ ಧ್ವಜ ವಿತರಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಸಾಹಿತಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಯಾತ್ರೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ, ಶಿಕ್ಷಣ ಇಲಾಖೆಯ ಚಿದಾನಂದಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net