ಟನ್ ಕಬ್ಬಿಗೆ ₹ 2400 ಕೊಡಿ

Sidramappa Andure
Published on

ಬೀದರ್: ಪ್ರಸಕ್ತ ಸಾಲಿನಲ್ಲಿ ನಿಗದಿ ಮಾಡಿದಂತೆ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 2400 ರೂ. ಹಾಗೂ ಒಂದು ಕೆಜಿ ಸಕ್ಕರೆ ತಕ್ಷಣ ನೀಡಬೇಕು. ನಿರ್ಲಕ್ಷೃ ಮಾಡಿದರೆ ಹೋರಾಟ ಮಾಡಲಾಗುವುದು ಎಂದು ಜಿಲ್ಲಾ ರೈತ ಸಂಘ (ಕೋಡಿಹಳ್ಳಿ ಬಣ) ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ಎಚ್ಚರಿಸಿದ್ದಾರೆ.

ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರಿಗೆ ಪತ್ರ ಬರೆದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಟನ್ ಕಬ್ಬಿಗೆ 2400 ರೂ. ದರ ಕೊಡಲು ತೀರ್ಮಾನಿಸಲಾಗಿತ್ತು. ಆದರೆ ಈವರೆಗೆ ಯಾವ ಕಾರ್ಖಾನೆಯವರೂ 2400ರೂ. ನೀಡಿಲ್ಲ. ತಕ್ಷಣ ಹಣ ಕೊಡದಿದ್ದಲ್ಲಿ ಹಂತ ಹಂತವಾಗಿ ಕಾರ್ಖಾನೆಗಳ ಎದುರು ಸತ್ಯಾಗ್ರಹ ಮಾಡಲಾಗುವುದು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net