ಟಯರ್​ ಸ್ಫೋಟವಾಗಿ ಮನೆಗೆ ನುಗ್ಗಿದ ಬಸ್​

30
Published on

ತಿಪಟೂರು: ಟಯರ್​ ಸ್ಫೋಟವಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಕೆಎಸ್​ಆರ್​ಟಿಸಿ ಬಸ್​ ಮನೆಯೊಂದಕ್ಕೆ ನುಗ್ಗಿದ್ದು, 32ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದಾರೆ.ಭಾನುವಾರ ಬೆಳಗ್ಗೆ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್​ ಮತ್ತಿಹಳ್ಳಿ ಗ್ರಾಪಂ ವ್ಯಾಪ್ತಿಯ ಕೊನೇಹಳ್ಳಿ ಸಮೀಪದ ಸಿದ್ದಾಪುರ ಬಳಿ ಬಸ್​ ಮುಂಭಾಗದ ಟಯರ್​ ಸ್ಫೋಟಗೊಂಡಿದೆ. ಈ ವೇಳೆ ನಿಯಂತ್ರಣಕಳೆದುಕೊಂಡು ಹೆದ್ದಾರಿ ಪಕ್ಕದಲ್ಲಿದ್ದ ಪುಟ್ಟಯ್ಯ ಎಂಬುವವರ ಮನೆಗೆ ಡಿಕ್ಕಿ ಹೊಡೆದಿದೆ.ಡಿಕ್ಕಿ ರಭಸಕ್ಕೆ ಮಕ್ಕಳು ಸೇರಿ 35ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿವೈಎಸ್​ಪಿ ವಿನಾಯಕ.ಎನ್​.ಶಟಗೇರಿ, ಗ್ರಾಮಾಂತರ ವೃತ್ತ ನಿರೀಕ್ಷಕ ಚಂದ್ರಶೇಖರ್​, ಹೊನ್ನವಳ್ಳಿ ಠಾಣೆ ಎಸ್​ಐ ಆರ್​.ರಾಜೇಶ್​, ಕೆಎಸ್​ಆರ್​ಟಿಸಿ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.32 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಪೈಕಿ ಇಬ್ಬರ ತಲೆಗೆ ತೀವ್ರತರ ಪೆಟ್ಟು ಬಿದ್ದಿರುವ

ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರಿಗೆ ಕೈ, ಕಾಲು, ಮೂಳೆ ಮುರಿದಿದೆ. ಉಳಿದವರಿಗೆ ಸಣ್ಣಪುಟ್ಟ ಪೆಟ್ಟಾಗಿವೆ ಎಂದು ತಿಪಟೂರು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶಿವಕುಮಾರ್​ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net