ಟಿಇಟಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ

dc ramchandran
Published on

ಬೀದರ್: ಅಕ್ಟೋಬರ್ 4ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪೂರ್ವಸಿದ್ಧತಾ ಸಭೆ ಜಿಲ್ಲಾಧಿಕಾರಿ ರಾಮಚಂದ್ರನ್ ಅಧ್ಯಕ್ಷತೆಯಲ್ಲಿ ಬುಧವಾರ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಕರೊನಾ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯೊಂದಿಗೆ ಪರೀಕ್ಷೆ ನಡೆಸುವ ವ್ಯವಸ್ಥೆ ಮಾಡಬೇಕು. ಎಲ್ಲ ಕೇಂದ್ರಗಳಿಗೆ ಸ್ಯಾನಿಟೈಜೇಶನ್ ಮಾಡಬೇಕು. ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ವೇಳೆ ಯಾರಿಗಾದರೂ ಕರೊನಾ ಲಕ್ಷಣ ಕಂಡು ಬಂದರೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು. ಯಾವುದೇ ರೀತಿಯ ಅವ್ಯವಹಾರಕ್ಕೆ ಅವಕಾಶವಿಲ್ಲದೆ ಪಾರದರ್ಶಕತೆಯಿಂದ ನಡೆಯುವಂತೆ ನೋಡಿಕೊಳ್ಳಬೇಕೆಂದು ಡಿಸಿ ಸೂಚಿಸಿದರು. ಅಂದು ಜಿಲ್ಲೆಯ 25 ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆ ನಡೆಯಲಿದೆ ಎಂದು ಪ್ರಭಾರಿ ಡಿಡಿಪಿಐ ಇನಾಯತ್ ಅಲಿ ಶಿಂಧೆ ತಿಳಿಸಿದರು. 25 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಸ್ಥಳೀಯ ಜಾಗೃತ ದಳದವರು ಮತ್ತು ಮಾರ್ಗಾಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net