ಟಿಎಚ್​ಒ ಚಿಕಿತ್ಸೆಗೆ ನೆರವು

carona logo
Published on

ಮುಂಡರಗಿ: ಕರೊನಾ ನಿಯಂತ್ರಣದಲ್ಲಿ ಹಗಲಿರುಳು ಶ್ರಮಿಸಿದ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಬಸವರಾಜ ಕೆ ಅವರಿಗೆ ಸೋಂಕು ದೃಢಪಟ್ಟಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆಸ್ಪತ್ರೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲರು ಭರವಸೆ ನೀಡಿದ್ದಾರೆ. ಜತೆಗೆ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ಸ್ಥಳೀಯ ಶಾಸಕರೂ ಸ್ಪಂದಿಸಿದ್ದಾರೆ ಎಂದು ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯ ಡಾ.ಕುಮಾರಸ್ವಾಮಿ ಹಿರೇಮಠ ತಿಳಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹದಿನೈದು ದಿನಗಳ ಹಿಂದೆಯೇ ಸೋಂಕು ದೃಢಪಟ್ಟು ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬಕ್ಕೆ ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಿಸಲು ತೊಂದರೆಯಾಗಿತ್ತು. ಈ ಬಗ್ಗೆ ಸ್ಥಳೀಯ ಬಿಜೆಪಿ ಪ್ರಮುಖರು ಸೇರಿ ಶಾಸಕರ, ಸಚಿವರ ಗಮನಕ್ಕೆ ತರಲಾಯಿತು. ಸ್ಪಂದಿಸಿದ ಶಾಸಕರು, ಸಚಿವರು ಸರ್ಕಾರದಿಂದ ಆಸ್ಪತ್ರೆ ವೆಚ್ಚ ಭರಿಸುವ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net