ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರನ ಕಾಲು ಜಖಂ

04-GPT-1
Published on

ಗುಂಡ್ಲುಪೇಟೆ: ಪಟ್ಟಣದ ಪ್ರವಾಸಿ ಮಂದಿರ ಬಳಿ ಬುಧವಾರ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಕಾಲು ನಜ್ಜುಗುಜ್ಜಾಗಿದೆ.

ಕೇರಳದ ಮಲ್ಲಪುರಂ ನಿವಾಸಿ ಜಾಸ್ಮೀನ್ (35) ಕಾಲು ಕಳೆದುಕೊಂಡ ಯುವಕ. ಬುಧವಾರ ಮುಂಜಾನೆ ಪಟ್ಟಣದ ಪ್ರವಾಸಿ ಮಂದಿರದ ಸಮೀಪ ಹೋಗುತ್ತಿದ್ದ ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದು ಸುಮಾರು 20 ಮೀಟರ್ ದೂರಕ್ಕೆ ಎಳೆದೊಯ್ದಿದೆ. ಇದರಿಂದ ಬೈಕ್ ಸವಾರ ಜಾಸ್ಮೀನ್ ಕಾಲುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.

ಅಪಘಾತ ನಡೆದ ಕೂಡಲೇ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರು ಗಾಯಾಳುವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದರು. ಮೂಳೆ ಮುರಿತಕ್ಕೊಳಗಾದ ಜಾಸ್ಮೀನ್‌ಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ. ಈ ಬಗ್ಗೆ ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕನ ಪತ್ತೆಗೆ ಕ್ರಮಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net