

ಮಳವಳ್ಳಿ: ತಾಲೂಕಿನ ನೆಲಮಾಕನಹಳ್ಳಿ ಸಮೀಪದ ಮದ್ದೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿ ಶನಿವಾರ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಚಾಲಕನಿಗೆ ತೀವ್ರ ಗಾಯವಾಗಿದೆ.
ಅವ್ವೇರಹಳ್ಳಿ ಗ್ರಾಮದ ಶ್ರೀಧರ್ ಟಿಪ್ಪರ್ ಚಾಲಕ ಗಾಯಾಳು. ಕ್ರಷರ್‌ನಿಂದ ಜಲ್ಲಿ ತುಂಬಿಸಿಕೊಂಡು ಪಟ್ಟಣದ ಕಡೆಗೆ ಟಿಪ್ಪರ್ ಚಾಲನೆ ಮಾಡಿಕೊಂಡು ಬರುತ್ತಿದ್ದಾಗ ನೆಲಮಾಕನಹಳ್ಳಿ ಸಮೀಪ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಮುಂದಾದ ವೇಳೆ ನಿಯಂತ್ರ ತಪ್ಪಿ ಟಿಪ್ಪರ್ ಉರುಳಿಬಿದ್ದಿದೆ.
ಕೂಡಲೇ ಸ್ಥಳೀಯರು ಟಿಪ್ಪರ್ ಒಳಗೆ ಸಿಲುಕಿದ್ದ ಚಾಲಕನನ್ನು ಹೊರಗೆಳೆದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.