ಟಿಬಿ ಡ್ಯಾಂ ಹೂಳು ತೆಗೆಸುವಂತೆ ಮನವಿ

23 YERRISWAMY 05
Published on

ಬಳ್ಳಾರಿ : ತುಂಗಭದ್ರಾ ಜಲಾಶಯದ ಹೂಳು ತೆರವಿಗೆ ಒತ್ತಾಯಿಸಿ, ಹೊಸಪೇಟೆಯ ತುಂಗಭದ್ರಾ ಜಲಾಶಯದ ಬಳಿ ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಜಿ. ಪುರುಷೋತ್ತಮ ಗೌಡ ಸಿಎಂ ಸಿದ್ದರಾಮಯ್ಯ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.
ಅಧ್ಯಕ್ಷ ಜಿ.ಪುರುಷೋತ್ತಮ ಗೌಡ ಬಳಿಕ ಮಾತನಾಡಿ, ತುಂಗಭದ್ರಾ ಜಲಾಶಯದಲ್ಲಿ 33 ಟಿಎಂಸಿ ಹೂಳು ತುಂಬಿರುವುದರಿಂದ ಜಲಾಶಯದ ನೀರಿನ ಸಾಮರ್ಥ್ಯ ಕಡಿಮೆಯಾಗಿದೆ. ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಕಾಲುವೆಗಳ ಕೆಳ ಭಾಗದ ರೈತರ ಬೆಳೆಗಳಿಗೆ ಸಮರ್ಪಕವಾಗಿ ನೀರು ಸಿಗುತ್ತಿಲ್ಲ ಎಂದು ತಿಳಿಸಿದರು. ಹಿಂದಿನ ವರ್ಷ ಕೇವಲ ಒಂದೇ ಬೆಳೆಗೆ ಮಾತ್ರ ನೀರು ಸಿಕ್ಕಿದ್ದು, ಎರಡನೇ ಬೆಳೆಗೆ ನೀರಿಲ್ಲದಂತಾಗಿತ್ತು. ಹೂಳಿನ ಸಮಸ್ಯೆಯಿಂದಾಗಿ ಮೇಲ್ಕಂಡ ಸಮಸ್ಯೆಗಳನ್ನು ಎದುರಿಸುತ್ತಿರುವ ರೈತರು ತಮ್ಮ ಜೀವನೋಪಾಯಕ್ಕಾಗಿ ಪಟ್ಟಣಗಳಿಗೆ ಗುಳೆ ಹೋಗುತ್ತಿದ್ದಾರೆ. ಅದಕ್ಕಾಗಿ ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳನ್ನು ತೆರವುಗೊಳಿಸುವ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net