ಟೀಕೆ ಬಿಡಿ ಅಭಿವೃದ್ಧಿ ಬಗ್ಗೆ ಮಾತನಾಡಿ

bkt-20-4
ಬಾಗಲಕೋಟೆ ನಗರದ ಪ್ರೇಸ್‌ಕ್ಲಬ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Published on

ಬಾಗಲಕೋಟೆ: ಕೇವಲ ಬಿಜೆಪಿ ನಾಯಕರ ಬಗ್ಗೆ ಟೀಕೆ ಮಾಡುವ ಮೊದಲು ಅರಿತುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚಕಾರ್ ಎತ್ತುತ್ತಿಲ್ಲ. ಟೀಕೆಗಳಿಂದ ತಮಗೆ ಶೋಭೆ ತರುವದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.

ನಗರದ ಪ್ರೇಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ತಮ್ಮ ಕಾಂಗ್ರೆಸ್ ಪಕ್ಷದ ನಾಯಕತ್ವ ಯಾರು ವಹಿಸಿಕೊಂಡಿದ್ದಾರೆ. ಪಕ್ಷದ ಪರಿಸ್ಥಿತಿ ಏನಾಗಿದೆ ಎನ್ನುವುದು ಅರಿತುಕೊಳ್ಳಬೇಕು. ರಾಜ್ಯದಲ್ಲಿ ಜನತಾ ಪಕ್ಷದ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿದ್ದಾರೆ. ಹಗರುವಾಗಿ ಮಾತನಾಡುವುದು ಇನ್ನಾದರು ನಿಲ್ಲಿಸಬೇಕು ಎಂದು ಸಚಿವ ತಿಮ್ಮಾಪುರಗೆ ತಿರುಗೇಟು ನೀಡಿದರು.

ಕೃಷಿ ಸಮ್ಮಾನ ನಿಧಿ ,ರೈತ ಮಕ್ಕಳ ವಿದ್ಯಾನಿಧಿ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ಸ್ಥಗೀತಗೊಳಿಸಿರುವ ಕಾಂಗ್ರೆಸ್ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಗಳ ಅನುದಾನಕ್ಕೆ ಕತ್ತರಿ ಹಾಕಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿರೋಧ ಪಕ್ಷದ ನಾಯಕನ ಆಯ್ಕೆಯನ್ನು ವರಿಷ್ಠರು ಶೀಘ್ರ ಆಯ್ಕೆ ಮಾಡಲಿದ್ದಾರೆ. ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಿದ ಸರ್ಕಾರ ಯಾವ ಪರಿಹಾರಕ್ಕೂ ಕ್ರಮ ತೆಗೆದುಕೊಂಡಿಲ್ಲ. ಅಭಿವೃದ್ಧಿ, ಪ್ರಗತಿ ಕುರಿತು ಸರ್ಕಾರ ಮೌನಕ್ಕೆ ಶರಣಾಗಿದೆ ಎಂದು ಕಿಡಿಕಾರಿದರು.

ಬಿಜೆಪಿ ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ ಮಾತನಾಡಿ, ಕೇಂದ್ರ ಸರ್ಕಾರ ಶೇ. ೩೩ ರಷ್ಟು ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಮಹಿಳಾ ಸಬಲೀಕರಣಕ್ಕೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ಐತಿಹಾಸಿಕ ಸಾಧನೆಯಾಗಿದೆ ಎಂದರು.

ಬೆಳಗಾವಿ ಪ್ರಭಾರಿ ಬಸವರಾಜ ಯಂಕಂಚಿ, ಪ್ರಧಾನ ಕಾರ್ಯದಶಿ ರಾಜು ನಾಯ್ಕರ ಉಪಸ್ಠಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net