ಟೆಂಪೋ ಪಲ್ಟಿ, 28 ಪ್ರಯಾಣಿಕರಿಗೆ ಗಾಯ

19Jaggu3-Web
ಖಾನಾಪುರ ತಾಲೂಕಿನ ಗರ್ಲಗುಂಜಿ ಬಳಿ ಪಲ್ಟಿಯಾಗಿರುವ ಟೆಂಪೋ.
Published on

ಬೆಳಗಾವಿ: ನಿಶ್ಚಿತಾರ್ಥಕ್ಕೆ ಹೊರಟ ಜನರನ್ನು ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ 28 ಪ್ರಯಾಣಿಕರು ಗಾಯಗೊಂಡ ಘಟನೆ ಖಾನಾಪುರ ತಾಲೂಕಿನ ಗರ್ಲಗುಂಜಿ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡವರೆಲ್ಲ ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಒಂದೇ ಕುಟುಂಬದವರು. ಗರ್ಲಗುಂಜಿ ಗ್ರಾಮದಲ್ಲಿ ನಿಗದಿಯಾಗಿದ್ದ ನಿಶ್ಚಿತಾರ್ಥದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಅವಘಡ ನಡೆದಿದೆ. ಗರ್ಲಗುಂಜಿ ಮತ್ತು ರಾಜಹಂಸಗಡ ಗ್ರಾಮಗಳ ನಡುವಿನ ಇಳಿಜಾರಿನಲ್ಲಿ ಸಾಗುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ವೃದ್ಧರು, ಮಕ್ಕಳು ಮತ್ತು ಮಹಿಳೆಯರೂ ಸಹ ಗಾಯಗೊಂಡಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net