ಟೈಲರ್ ನಿಗಮ, ಮಂಡಳಿ ಸ್ಥಾಪಿಸಿ

03M.D.R.2
Published on

ಮದ್ದೂರು: ಟೈಲರ್‌ಗಳು ಸರ್ಕಾರದ ಸವಲತ್ತುಗಳನ್ನು ಪಡೆಯಲು ಹಾಗೂ ಆರ್ಥಿಕವಾಗಿ ಸದೃಢರಾಗಲು ಸರ್ಕಾರ ನಿಗಮ, ಮಂಡಳಿ ಸ್ಥಾಪನೆ ಮಾಡುವಂತೆ ಅಖಿಲ ರಾಜ್ಯ ಟೈಲರ್ ಸಂಘಗಳ ಒಕ್ಕೂಟದ ಅಧ್ಯಕ್ಷ ಪುಟ್ಟಸ್ವಾಮಿಗೌಡ ಆಗ್ರಹಿಸಿದರು.

ತಾಲೂಕಿನ ಬೆಸಗರಹಳ್ಳಿ ಗ್ರಾಮದಲ್ಲಿ ಅಖಿಲ ಕರ್ನಾಟಕ ರಾಜ್ಯ ಟೈಲರ್ ಸಂಘಗಳ ಒಕ್ಕೂಟದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಬೆಸಗರಹಳ್ಳಿ ಟೈಲರ್ ಸಂಘವನ್ನು ಊದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಟೈಲರ್‌ಗಳು ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಹಿಂದುಳಿದ್ದು, ನಾವುಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಸರ್ಕಾರ ನಿಗಮ, ಮಂಡಳಿ ಸ್ಥಾಪನೆ ಮಾಡಬೇಕು. ಇದಕ್ಕೆ ನಾವೆಲ್ಲ ಒಗ್ಗಟ್ಟಾಗಿ ಹೋರಾಟ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಬೇಕು ಎಂದರು.

ರಾಜ್ಯ ಗೌರವಾಧ್ಯಕ್ಷ ಆನಂದ್ ಕಾಂಚಾಣ, ಖಜಾಂಚಿ ರಾಧಾ ಧನರಾಜ್, ಉಪಾಧ್ಯಕ್ಷರಾದ ಚನ್ನಪ್ಪ ನಾಯಕ್, ಸುಮತಿ ನಾಯ್ಡು, ಗೋವಿಂದ ನಾಯಕ್, ಪರಮೇಶ್, ಪ್ರಕಾಶ್, ಬೆಸಗರಹಳ್ಳಿ ಟೈಲರ್ ಸಂಘದ ಅಧ್ಯಕ್ಷ ಎಸ್.ಪಿ.ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಮುತ್ತುರಾಜ್, ಖಜಾಂಚಿ ರಾಮಕೃಷ್ಣ, ಕಾರ್ಯದರ್ಶಿ ರವಿಕುಮಾರ್ ಹಾಗೂ ರಾಮಮೂರ್ತಿ, ಚಂದ್ರಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net