ಟ್ರಕ್ ಡಿಕ್ಕಿ ಬೈಕ್ ಸವಾರ ಸಾವು

Published on

ಚಾಮರಾಜನಗರ: ತಾಲೂಕಿನ ಬದನಗುಪ್ಪೆ ಕೈಗಾರಿಕಾ ಪ್ರದೇಶದ ಸಮೀಪದಲ್ಲಿ ಟ್ರಕ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ರಾಜಸ್ಥಾನ್ ಮೂಲದ ಸಂಪತ್‌ರಾಮ್ (47) ಮೃತ ದುರ್ದೈವಿ. ಈತ ಬದನಗುಪ್ಪೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಮಂಗಳವಾರ ರಾತ್ರಿ ಟ್ರಕ್ ವಾಹನವು ತರಕಾರಿ ತುಂಬಿಕೊಂಡು ಮೈಸೂರಿನಿಂದ ತಮಿಳುನಾಡಿನ ಕಡೆಗೆ ತೆರಳುತ್ತಿದ್ದು, ಬೈಕ್ ಸವಾರ ಸಂಪತ್‌ರಾಮ್ ಬದನಗುಪ್ಪೆ ಕಡೆಗೆ ತೆರಳುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿದು ಕೂಡಲೇ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೈಕ್ ಸವಾರನ ದೇಹವನ್ನು ನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ. ಟ್ರಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net