ಟ್ರಾಕ್ಟರ್ ಡಿಕ್ಕಿ: ವಿದ್ಯಾರ್ಥಿ ಸಾವು

Mallesh
Published on

ರಾಯಚೂರು: ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ಶುಕ್ರವಾರ ಜರುಗಿದೆ.
ಮೃತ ವಿದ್ಯಾರ್ಥಿಯನ್ನು ಗ್ರಾಮದ ಮಲ್ಲೇಶ (17) ಎಂದು ಗುರುತಿಸಲಾಗಿದೆ. ತುಂಗಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಇಡಪನೂರು ಮಾರ್ಗವಾಗಿ ಕೊತ್ತದೊಡ್ಡಿಗೆ ಟ್ರಾಕ್ಟರ್ ಆಗಮಿಸಿದ ಸಂದರ್ಭದಲ್ಲಿ ರಸ್ತೆ ಪಕ್ಕದ ಶಾಲೆಗೆ ಹೋಗುತ್ತಿದ್ದ ಮಲ್ಲೇಶನಿಗೆ ಡಿಕ್ಕಿ ಹೊಡೆದಿದೆ.
ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net