ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

Published on

ಮಳವಳ್ಳಿ : ತಾಲೂಕಿನ ಹೊಸಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಕಾರೊಂದು ಟ್ರ್ಯಾಕ್ಟರ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ.

ಪಟ್ಟಣದ ಗಂಗಾಮತ ಬಡಾವಣೆ ನಿವಾಸಿ ಮಹದೇವಮ್ಮ(75) ಮೃತಪಟ್ಟಿದ್ದು, ಮಂಡ್ಯ ಮೂಲದ ಮಂಜುನಾಥ, ಪ್ರದೀಪ, ನಾಗೇಂದ್ರ, ಕಿರಣ್ ಕುಮಾರ್ ಗಾಯಗೊಂಡಿದ್ದಾರೆ. ಇವರೆಲ್ಲ ಮಹದೇಶ್ವರ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದು ವಾಪಸಾಗುತ್ತಿದ್ದ ವೇಳೆ ಮರಗಳ ಪೋಲ್ ತುಂಬಿಸಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಟ್ರ್ಯಾಲಿಯ ಹಿಂಬದಿಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಿಂದ ಕಾರಿನಲ್ಲಿದವರು ತೀವ್ರವಾಗಿ ಗಾಯಗೊಂಡು ಚೀರಾಡುತ್ತಿದ್ದರು. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮಹದೇವಮ್ಮ ಮೃತಪಟ್ಟರು. ಉಳಿದವರಿಗೆ ಪ್ರಥಮ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net