ಡಯಾಲಿಸಸ್ ಸೇವೆ ಸದುಪಯೋಗ ಪಡೆದುಕೊಳ್ಳಿ

18 YERRISWAMY 02
Published on

ಬಳ್ಳಾರಿ : ಡಯಾಲಿಸಸ್ ಸೇವೆ ಪಡೆಯಲು ಬಿಮ್ಸ್ ಹಾಗೂ ಜಿಲ್ಲೆಯ ಎಲ್ಲ ಸಾರ್ವಜನಿಕ ಆಸ್ಪತ್ರೆಗಳ ಕೇಂದ್ರಗಳಲ್ಲಿ ಉಚಿತವಾಗಿ ಡಯಾಲಿಸಸ್ ಸೇವೆ ನೀಡಲಾಗುತ್ತಿದ್ದು, ಇದರ ಸೇವೆ ಪಡೆದುಕೊಳ್ಳಲು ಸಾರ್ವಜನಿಕರಿಗೆ ಸೂಚಿಸಬೇಕು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಡಿಸಿ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ಡಯಾಲಿಸಸ್ ಸೇವೆಗಳ ಅನುಷ್ಟಾನ ಕಾರ್ಯಕ್ರಮದಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಿಮ್ಸ್ ಹಾಗೂ ಖಾಸಗಿ ಡಯಾಲಿಸಸ್ ಆಸ್ಪತ್ರೆಗಳ ಅಧಿಕಾರಿಗಳು ಮತ್ತು ವೈದ್ಯರೊಂದಿಗೆ ಡಯಾಲಿಸಸ್ ಸೇವೆಗಳ ನೀಡುವಿಕೆ ಕುರಿತು ನಡೆದ ಸಮನ್ವಯ ಸಭೆಯಲ್ಲಿ ತಜ್ಞರೊಂದಿಗೆ ಚರ್ಚಿಸಿ ಮಾತನಾಡಿದರು. ಸಾರ್ವಜನಿಕರಿಗೆ ನೀಡುವ ಸೇವೆಗಳನ್ನು ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಗಳ ಅಧಿಕಾರಿಗಳು ನಿರಂತರ ಭೇಟಿ ನೀಡುವ ಮೂಲಕ ಸೇವೆಗಳ ಗುಣಮಟ್ಟದ ಕುರಿತು ಪರಿಶೀಲನೆ ಹಾಗೂ ನಿಗಾವಹಿಸಬೇಕು ಎಂದು ನಿರ್ದೇಶಿಸಿದರು. ನಗರದಲ್ಲಿ ಡಯಾಲಿಸಸ್ ಸೇವೆಯನ್ನು ಒದಗಿಸುತ್ತಿರುವ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಸರ್ಕಾರದ ಡಯಾಲಿಸಸ್ ಸೇವೆ ನೀಡುವಿಕೆಯ ಪ್ರತಿ ಸೈಕಲ್‌ನ ದರ ಪ್ಯಾಕೇಜ್ ಕುರಿತು ಚರ್ಚಿಸಲಾಗುತ್ತಿದ್ದು, ಅಲ್ಲಿಯೂ ಸಹ ಉಚಿತ ಸೇವೆ ನೀಡಲು ಕ್ರಮವಹಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net