ಡಾ.ಅಂಬೇಡ್ಕರ್ ಮಹಾನ್ ಮಾನವತಾವಾದಿ

22ard01
ಔರಾದ್‌ನ ಪತ್ರಿ ಸ್ವಾಮಿ ಪದವಿ ಪೂರ್ವ ಕಾಲೇಜನಲ್ಲಿ ಸೋಮವಾರ ಏರ್ಪಡಿಸಿದ್ದ ಡಾ.ಅಂಬೇಡ್ಕರ್ ಕುರಿತು ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಗುಂಡಪ್ಪಾ ವಕೀಲ ಮಾತನಾಡಿದರು. ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ಡಾ.ಮನ್ಮಥ ಡೋಳೆ, ಶಿವಕುಮಾರ ಘಾಟೆ , ರವೀಂದ್ರ, ಓಂಪ್ರಕಾಶ ದಡ್ಡೆ, ರತ್ನದೀಪ ಕಸ್ತೂರೆ ಇತರರಿದ್ದರು.
Published on

ಔರಾದ್: ಡಾ.ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ವಾಸ್ತು ಶಿಲ್ಪಿಗಳಾಗಿದ್ದು, ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಮಹಾನ್ ಮಾನವತಾವಾದಿ ಎಂದು ಮಾಜಿ ಶಾಸಕ ಗುಂಡಪ್ಪ ವಕೀಲ ಹೇಳಿದರು.

ಪಟ್ಟಣದ ಪತ್ರಿ ಸ್ವಾಮಿ ಪದವಿ ಪೂರ್ವ ಕಾಲೇಜನಲ್ಲಿ ರಮಾಬಾಯಿ ಅಂಬೇಡ್ಕರ್ ಸಾಂಸ್ಕೃತಿಕ ಸಂಘ ಲಾದಾ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಡಾ.ಅಂಬೇಡ್ಕರ್ ಕುರಿತು ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ.ಅಂಬೇಡ್ಕರ್ ಸಂವಿಧಾನದಲ್ಲಿ ಸಮಾನತೆ ತತ್ವವನ್ನು ಅಳವಡಿಸಿಕೊಳ್ಳುವ ಮೂಲಕ ಶೋಷಿತ ವರ್ಗದವರನ್ನು ಮುಖ್ಯ ವಾಹಿನಿಗೆ ತರಲು ಶ್ರಮಿಸಿದರು ಎಂದು ಹೇಳಿದರು.

ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಸಮ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟು ಅತ್ಯುತ್ತಮ ಸಂವಿಧಾನ ರಚಿಸಿಕೊಟ್ಟ ಮಹಾನ್ ಸಂವಿಧಾನಿಕ ತಜ್ಞ ಡಾ.ಅಂಬೇಡ್ಕರ್‌ರನ್ನು ಸದಾ ಸ್ಮರಣೆ ಮಾಡಬೇಕು ಎಂದರು.

ಡಾ.ಮನ್ಮಥ ಡೋಳೆ ವಿಶೇಷ ಉಪನ್ಯಾಸ ನೀಡಿದರು. ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿ ರವೀಂದ್ರ, ಸಂಘದ ಅಧ್ಯಕ್ಷೆ ಕಲಾವತಿ, ಓಂಪ್ರಕಾಶ ದಡ್ಡೆ, ರತ್ನದೀಪ ಕಸ್ತೂರೆ, ಅಕಿಲ್, ಅನಿಲ, ಅಭಿಷೇಕ ಮಾನಕರೆ, ಸಂಗೀತ ಕಲಾವಿದ ಮಾರುತಿ, ಬೇಂದ್ರೆ, ಪಂಡರಿ ಕಸ್ತೂರೆ, ಆದರ್ಶ ನಾಗುರೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net