

ಕಲಬುರಗಿ: ಜಿಲ್ಲಾ ವೀರಶೈವ ಸಮಾಜದಿಂದ ನಗರದ ಪೂಜ್ಯ ಬಸವರಾಜಪ್ಪ ಅಪ್ಪ ಸ್ಮರಣಾರ್ಥ ಭವನದಲ್ಲಿ ಬುಧವಾರ ಸಂಜೆ ೪ಕ್ಕೆ ಶ್ರೀ ಶರಣಬಸವೇಶ್ವರ ಸಂಸ್ಥಾನದ ೯ನೇ ಪೀಠಾಧಿಪತಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ೮೯, ೯ನೇ ಪೀಠಾಧಿಪತಿ ಚಿ.ದೊಡ್ಡಪ್ಪ ಅಪ್ಪ ೭ ಹಾಗೂ ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ ಅವರ ೫೪ನೇ ಜನ್ಮ ದಿನೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಅರುಣಕುಮಾರ ಪಾಟೀಲ್ ಕೊಡಲಹಂಗರಗಾ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ತಿಳಿಸಿದರು.
ಈ ಮೂವರು ಮಹನೀಯರ ಜನ್ಮದಿನ ನವೆಂಬರ್‌ನಲ್ಲಿ ಇರುವುದರಿಂದ ಒಟ್ಟಿಗೆ ಜನ್ಮ ದಿನೋತ್ಸವ ಆಚರಿಸಲಾಗುತ್ತಿದೆ. ಶ್ರೀ ಡಾ.ಶರಣಬಸವಪ್ಪ ಅಪ್ಪ ಸಾನ್ನಿಧ್ಯ ಹಾಗೂ ಜಗದ್ಗುರು ಶ್ರೀ ಡಾ.ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ, ಡಾ.ರಾಜಶೇಖರ ಶಿವಾಚಾರ್ಯರು ನೇತೃತ್ವ ವಹಿಸುವರು ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಣ್ಣ ಕೈಗಾರಿಕೆ ಸಚಿವ ಸಚಿವ ಶರಣಬಸಪ್ಪ ದರ್ಶನಾಪುರ ಕಾರ್ಯಕ್ರಮ ಉದ್ಘಾಟಿಸುವರು. ಸಚಿವ ಡಾ.ಶರಣಪ್ರಕಾಶ ಪಾಟೀಲï, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಎಂ.ವೈ. ಪಾಟೀಲ್, ಬಿ.ಆರ್. ಪಾಟೀಲ್, ಡಾ.ಬಿ.ಜಿ. ಪಾಟೀಲ್, ಶಶೀಲ್ ನಮೋಶಿ, ಕನೀಜ್ ಫಾತಿಮಾ, ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ್, ಎಚ್‌ಕೆಇ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ, ಮಾಜಿ ಅಧ್ಯಕ್ಷ ಬಸವರಾಜ ಭೀಮಳ್ಳಿ, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ರಾಜಕುಮಾರ ಪಾಟೀಲ್ ತೆಲ್ಕೂರ, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಅಮರನಾಥ ಪಾಟೀಲ್, ಕೆಕೆಸಿಸಿಐ ಅಧ್ಯಕ್ಷ ಶಶಿಕಾಂತ ಪಾಟೀಲ್, ಕ್ರೆಡಲ್ ಮಾಜಿ ಅಧ್ಯಕ್ಷ ಚಂದು ಪಾಟೀಲ್, ಶಿವಕಾಂತ ಮಹಾಜನ್ ಮುಖ್ಯ ಅತಿಥಿಗಳಾಗಿರುವರು ಎಂದು ತಿಳಿಸಿದರು.
ಅರುಣಕುಮಾರ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದು, ಡಾ.ನೀಲಾಂಬಿಕಾ ಶೇರಿಕಾರ ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮ ನಿಮಿತ್ತ ಡಾ.ಪಿ.ಎಸ್. ಶಂಕರ್, ಪ್ರೊ.ಕೋ.ರಂ. ಬಸವರಾಜು ಅವರಿಗೆ ರಾಜ್ಯ ಮಟ್ಟದ ಶರಣಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.
ಶಶಿಕಾಂತ ಪಾಟೀಲ್, ನಿತೀನ್ ಜವಳಿ, ಕಲ್ಯಾಣಪ್ಪ ಪಾಟೀಲ್, ಡಾ.ಶ್ರೀಶೈಲ ಘೂಳಿ, ಸಂಗಮೇಶ ನಾಗನಹಳ್ಳಿ ಇತರರಿದ್ದರು.