ಡಾ.ಆಕಾಶ ಕಲಬುರಗಿಯ ಹೆಚ್ಚುವರಿ ಶಿಕ್ಷಣ ಆಯುಕ್ತರಾಗಿ ನಿಯೋಜನೆ

IMG-20230808-WA0033
Published on


ವಿಜಯವಾಣಿ ಸುದ್ದಿಜಾಲ ಕಲಬುರಗಿ
ಇಲ್ಲಿರುವ ಶಿಕ್ಷಣ ಇಲಾಖೆಯ ಆಯುಕ್ತಾಲಯದ  ಹೆಚ್ಚುವರಿ ಆಯುಕ್ತರಾಗಿ ಐಎಎಸ್ ಅಧಿಕಾರಿ ಡಾ.ಆಕಾಶ ಶಂಕರ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಇದುವರೆಗೂ  ಆನಂದ ಪ್ರಕಾಶ ಮೀನಾ ಪ್ರಭಾರಿಯಾಗಿದ್ದರು.
ಡಾ.ಆಕಾಶ ೨೦೧೯ನೇ ಸಾಲಿನ ಐಎಎಸ್ ಅಧಿಕಾರಿಯಾಗಿದ್ದಾರೆ. ಎರಡು ದಿನಗಳಲ್ಲಿ ಅವರು ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net