ಡಾ.ಎಚ್.ಸಿ.ಮಹದೇವಪ್ಪ ದಲಿತ ರಾಜಕಾರಣದ ಕೊಂಡಿ

IMG_20250420_130648
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 47;
Published on

ಚಾಮರಾಜನಗರ: ರಾಜ್ಯದ ಸಮಾಜಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ದಲಿತ ರಾಜಕಾರಣದ ಕೊಂಡಿಯಾಗಿದ್ದಾರೆ ಎಂದು ಭೀಮ ಬಗಳದ ಪದಾಧಿಕಾರಿ ಹಾಗೂ ಯುವ ಮುಖಂಡ ಪರಶಿವಮೂರ್ತಿ ತಿಳಿಸಿದರು.

ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾಸ್ಪತ್ರೆ ಮುಂಭಾಗ ಡಾ.ಎಚ್.ಸಿ.ಮಹದೇವಪ್ಪ ಅವರ ಜನುಮದಿನದ ಅಂಗವಾಗಿ ಭೀಮ ಬಳಗದ ವತಿಯಿಂದ ಭಾನುವಾರ ಆಯೋಜಿಸಿದ್ದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ರಾಜ್ಯದ ರಾಜಕಾರಣದಲ್ಲಿ ಡಾ.ಸಿ.ಎಚ್.ಮಹದೇವಪ್ಪ ಅವರು ತನ್ನದೇಯಾದ ಛಾಪು ಮೂಡಿಸಿದ್ದಾರೆ. ಈ ಹಿಂದೆ ಲೋಕೋಪಯೋಗಿ ಸಚಿವರಾಗಿದ್ದ ಸಂದರ್ಭದಲ್ಲಿ ರಾಜ್ಯದ ಪ್ರಮುಖ ರಸ್ತೆಗಳ ಅಭಿವೃದ್ಧಿಯಲ್ಲಿ ಪ್ರಧಾನ ಪಾತ್ರವನ್ನು ವಹಿಸಿದ್ದರು. ಪ್ರಸ್ತುತ ಸಮಾಜ ಕಲ್ಯಾಣ ಸಚಿವರಾಗಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮುಂದಿನ ತಲೆಮಾರಿಗೆ ಸಂವಿಧಾನದ ಮೌಲ್ಯವನ್ನು ಸಾರಿದ್ದಾರೆ ಎಂದರು.

ಜಿಲ್ಲೆಯ ರಾಜಕಾರಣದ ಮೇಲೂ ಸಾಕಷ್ಟು ಹಿಡಿತವನ್ನು ಸಾಧಿಸಿರುವ ಎಚ್.ಸಿ.ಮಹದೇವಪ್ಪ ಅವರು ತಮ್ಮ ಪುತ್ರ ಸುನೀಲ್ ಬೋಸ್ ಅವರನ್ನು ಸಂಸದರಾಗಿ ಗೆಲ್ಲಿಸುವ ಮೂಲಕ ಅಭಿವೃದ್ಧಿಗೆ ನಾಂದಿಯಾಡಿದ್ದಾರೆ. ಅವರಿಗೆ ದೇವರು ಆಯುಷ್ಯ ಮತ್ತು ಆರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.

ವಿದ್ಯಾರ್ಥಿ ನಾಯಕ ಎನ್.ಲೋಹಿತ್ ರಾಜ್ ಮಾತನಾಡಿ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶ ಮುಂದಿನ ದಿನಗಳಲ್ಲಿ ಒದಗಿ ಬರಲಿ ಎಂದರು.

ಈ ಸಂದರ್ಭದಲ್ಲಿ ಭೀಮ ಬಳಗದ ಉಮಾಪತಿ, ಗಂಗಾಧರ್, ಅಕ್ಷಯ್, ಕೌಶಿಕ್, ಮಹದೇವಪ್ರಸಾದ್, ಮಹೇಶ್ ಚಂದ್ರು, ನವೀನ್ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net