ಡಾ.ಕೋರೆ ಕಾರ್ಯ ಶ್ಲಾಘನೀಯ

2Ckd1
Published on

ಚಿಕ್ಕೋಡಿ: ಕೆಎಲ್‌ಇ ಸಂಸ್ಥೆಯನ್ನು ಉತ್ತುಂಗಕ್ಕೇರಿಸಿ ಕಲೆ, ಶಿಕ್ಷಣ, ಆರೋಗ್ಯ, ವೈದ್ಯಕೀಯ ಹಾಗೂ ಸಂಶೋಧನೆ ಮೂಲಕ ಜನಸೇವೆ ಮಾಡುತ್ತಿರುವ ಡಾ.ಪ್ರಭಾಕರ ಕೋರೆ ಅವರ ಸೇವೆ ಶ್ಲಾಘನೀಯ ಎಂದು ಶಾಸಕ ಡಿ.ಎಂ.ಐಹೊಳೆ ಬಣ್ಣಿಸಿದರು.

ತಾಲೂಕಿನ ಅಂಕಲಿ ಗ್ರಾಮದ ಕೋರೆ ಅವರ ನಿವಾಸದಲ್ಲಿ ಶುಕ್ರವಾರ ೭೮ನೇ ಜನ್ಮದಿನದ ಹಿನ್ನೆಲೆಯಲ್ಲಿ ಸನ್ಮಾನಿಸಿ ಮಾತನಾಡಿ, ಡಾ.ಪ್ರಭಾಕರ ಕೋರೆ ಅವರು ಹಲವಾರು ಹುದ್ದೆ ಅಲಂಕರಿಸಿ ಸಮಾಜ ಸೇವೆ ಮಾಡುತ್ತಿದ್ದಾರೆ. ಡಾ.ಪ್ರಭಾಕರ ಕೋರೆ ಅವರು ಕೆಎಲ್‌ಇ ಸಂಸ್ಥೆಯ ಚುಕ್ಕಾಣಿ ಹಿಡಿದ ಬಳಿಕ ೨೫೦ಕ್ಕೂ ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ದೇಶ-ವಿದೇಶದಲ್ಲಿ ಪ್ರಾರಂಭಿಸಿ ಶೈಕ್ಷಣಿಕ, ವೈದ್ಯಕೀಯ, ಕೃಷಿ ಕ್ಷೇತ್ರದಲ್ಲಿ ಕ್ರಾಂತಿಯನ್ನುಂಟು ಮಾಡಿದ್ದಾರೆ. ಸಾಮಾಜಿಕ ಕ್ಷೇತ್ರದಲ್ಲಿ ಕನ್ನಡಪರ ಹೋರಾಟ ಹಾಗೂ ಸಾಹಿತ್ಯ ಸಮ್ಮೇಳನಗಳನ್ನು ವಿಶ್ವ ಹಾಗೂ ರಾಜ್ಯಮಟ್ಟದಲ್ಲಿ ಮಾಡಿದ ಕೀರ್ತಿ ಕೋರೆಯವರಿಗೆ ಸಲ್ಲುತ್ತದೆ ಎಂದರು.

ಸದಾಶಿವ ಘೋರ್ಪಡೆ, ಅಣ್ಣಾಸಾಹೇಬ ಖೇಮಲಾಪೂರೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net