ಡಾ. ಜೋಶಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

13 vikram 3 (Dr. S K Joshi)
Published on

ಧಾರವಾಡ: ಶಿಕ್ಷಕರ ದಿನ ಪ್ರಯುಕ್ತ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಶಾಖೆ ವತಿಯಿಂದ ಎಸ್‌ಡಿಎಂ ವಿಶ್ವ ವಿದ್ಯಾಲಯದ ಸಹ ಉಪ ಕುಲಪತಿ, ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಹಾಗೂ ರೇಡಿಯೋ ಡೈಯಗ್ನೋಸಿಸ್ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಶ್ಯಾಮಸುಂದರ್ ಕೆ. ಜೋಶಿ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಡಾ. ಶ್ಯಾಮಸುಂದರ್ ಜೋಶಿ ಅವರು ವೈದ್ಯಕೀಯ ಕ್ಷೇತ್ರದಲ್ಲಿ ನೀಡಿದ ಅಪಾರ ಕೊಡುಗೆ, ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳಿಗೆ ತರಬೇತಿಗೊಳಿಸಿದ ಶಿಕ್ಷಕರು ಎಂದು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ನಿರಂಜನಕುಮಾರ್, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net