ಡಾ.ಪಟ್ಟದ್ದೇವರಿಗೆ ಸಿರಿಗನ್ನಡಂಗೆಲ್ಗೆ ರಾ.ಹ.ದೇಶಪಾಂಡೆ ಪ್ರಶಸ್ತಿ

bdr ph
Published on

ಭಾಲ್ಕಿ: ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘವು ಕೊಡಮಾಡುವ ಸಿರಿಗನ್ನಡಂ ಗೆಲ್ಗೆ ರಾ.ಹ.ದೇಶಪಾಂಡೆ ಪ್ರಶಸ್ತಿಗೆ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರೂ ಆದ ಭಾಲ್ಕಿ ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರನ್ನು ಆಯ್ಕೆ ಮಾಡಲಾಗಿದೆ.

ಕರ್ನಾಟಕ ವಿದ್ಯಾವರ್ಧಕ ಸಂಘ ೧೩೪ನೇ ಸಂಸ್ಥಾಪನಾ ದಿನ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಏಳಿಗೆಗಾಗಿ ಸಾಮಾಜಿಕ ಬದ್ಧತೆಯೊಂದಿಗೆ ಕಾರ್ಯಮಾಡುತ್ತಿರುವ ಸಂಸ್ಥೆ, ವ್ಯಕ್ತಿಗಳಿಗೆ ಸಂಘದ ಸಂಸ್ಥಾಪಕ ರಾ.ಹ.ದೇಶಪಾಂಡೆ ಹೆಸರಿನಲ್ಲಿ ಸಿರಿಗನ್ನಡಂ ಗೆಲ್ಗೆ ರಾ.ಹ.ದೇಶಪಾಂಡೆ ಪ್ರಶಸ್ತಿ ನೀಡಲಾಗುತ್ತಿದೆ. ಗಡಿ ಭಾಗದಲ್ಲಿ ಪಟ್ಟದ್ದೇವರು ಮಾಡುತ್ತಿರುವ ತ್ರಿವಿಧ ದಾಸೋಹ ಸೇವೆಗಾಗಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರದಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದ್ದಾರೆ.

ನಿಜಾಮನ ಆಳ್ವಿಕೆಯಲ್ಲಿ ಕನ್ನಡ ಉಳಿಸಿ ಬೆಳೆಸಿದ ಶ್ರೇಯ ಭಾಲ್ಕಿ ಹಿರೇಮಠ ಸಂಸ್ಥಾನಕ್ಕೆ ಸಲ್ಲುತ್ತದೆ. ಜು.೨೨ ರಂದು ಧಾರವಾಡದಲ್ಲಿ ನಡೆಯುವ ಸಮಾರಂಭದಲ್ಲಿ ಶ್ರೀಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಪ್ರಶಸ್ತಿ ೫೦ ಸಾವಿರ ರೂ.ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net