

ಬಾಗಲಕೋಟೆ: ಡಾ|| ಬಾಬಾಸಾಹೇಬ ಅಂಬೇಡ್ಕರ ಅವರು ರಚಿಸಿದ ಸಂವಿಧಾನದ ಅಡಿಯಲ್ಲಿ ದೇಶ ಮುನ್ನಡೆಯುತ್ತಿದ್ದು, ಅವರ ಕೊಡುಗೆ ದೇಶಕ್ಕೆ ಅಪಾರವಾಗಿದೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಅವರು ಮಾತನಾಡಿದರು.
ಇಂದು ಭಾರತ ದೇಶದಲ್ಲಿ ಆಡಳಿತ ನಡೆಸುತ್ತಿರುವ ರಾಜಕೀಯ ಪಕ್ಷಗಳು ಅವರ ರಚಿಸಿದ ಸಂವಿಧಾನದ ಅಡಿಯಲ್ಲಿ ನಡೆಯುತ್ತಿರುವುದು ಶ್ಲಾಘನೀಯ. ಭಾರತ ದೇಶಾದ್ಯಂತ ಅಷ್ಟೇ ಅಲ್ಲದೇ ಅವರ ವಿಚಾರಧಾರೆಗಳನ್ನು ಮನದಲ್ಲಿಟ್ಟುಕೊಂಡು ದೇಶ ವಿದೇಶದಲ್ಲಿ ಅವರ ಜನ್ಮದಿನವನ್ನು ಆಚರಿಸುತ್ತಿರುವುದು ತುಂಬಾ ಸಂತೋಷದಾಯಕ ವಿಚಾರ. ಅಂಬೇಡ್ಕರ್ ಅವರ ವಿಚಾರಧಾರೆಯಲ್ಲಿ ಇಂದು ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಅಽಕಾರ ನಡೆಸುತ್ತಿದೆ ಎಂದರು.
ಕಾ0ಗ್ರೆಸ್ ಪಕ್ಷದ ಎಸ್.ಸಿ.ಘಟಕದ ಜಿಲ್ಲಾಧ್ಯಕ್ಷ ರಾಜು ಎಸ್.ಮನ್ನಿಕೇರಿ ಮಾತನಾಡಿ, ಬಾಬಾಸಾಹೇಬ ಅಂಬೇಡ್ಕರ್ ಅವರು ಈ ದೇಶದ ಸಂವಿಧಾನ ರಚಿಸದೇ ಹೋದರೆ ದೇಶದಲ್ಲಿರುವ ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಹಾಗೂ ದಲಿತರು ಈ ಹಿಂದಿನ ಕಾಲದಲ್ಲಿ ಅನುಭವಿಸಿದ ನೋವುಗಳನ್ನು ಅನುಭವಿಸಬೇಕಾಗಿತ್ತು. ಸಮಾನತೆ ತರುವ ಮೂಲಕ ಬೆಳಕು ನೀಡಿದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ, ಮುಖಂಡರಾದ ಮಲ್ಲಿಕಾರ್ಜುನ ಮೇಟಿ, ಉಮೇಶ ಮೇಟಿ, ನಾಗರಾಜ ಹದ್ಲಿ, ಶ್ರವಣ ಖಾತೇದಾರ, ಗುಣವಂತಿ ನಿಡೋಣಿ, ರೇಣುಕಾ ನ್ಯಾಮಗೌಡರ, ರೇಣುಕಾ ನಾರಾಯಣಕರ, ಹಣಮಂತ ಗೊರವರ, ವೈ.ವೈ.ತಿಮ್ಮಾಪುರ, ಮಲ್ಲು ಶಿರೂರ, ವಿಜಯ ಕಮತಗಿ, ಅಬ್ದುಲ್ ಬಾಗವಾನ, ರಮೇಶ ಸನದಿ, ವೀರಣ್ಣ ಹುಂಡೇಕಾರ ಇದ್ದರು.